ಪುತ್ತೂರು:ಮೇ 11ರಂದು ಪುತ್ತೂರು ನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಿಡಿಲು ಸಹಿತ ಭಾರೀ ಗಾಳಿ ಮಳೆಯಾಗಿದ್ದು ಕೆಲವೆಡೆ ಮರಗಳು ಉರುಳಿ ಬಿದ್ದಿರುವುದರಿಂದ ರಸ್ತೆ ಸಂಚಾರಕ್ಕೆ ಅಡ್ಡಿಯಾಗಿದೆ. ವಿದ್ಯುತ್ ಕಂಬಗಳೂ ಮುರಿದು ಬಿದ್ದಿರುವುದರಿಂದ ವಿದ್ಯುತ್ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
ರಾತ್ರಿ ಗುಡುಗು ಸಹಿತ ಭಾರೀ ಮಳೆಯಾಗಿದ್ದು ಗಾಳಿಗೆ ಮರಗಳು ಉರುಳಿ ಬಿದ್ದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಿದ್ಯುತ್ ಕಂಬಗಳು ಮುರಿದು ಬಿದ್ದ ಪರಿಣಾಮ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಪುತ್ತೂರು,ಕುಂಬ್ರ, ತಿಂಗಳಾಡಿ, ಕೆಯ್ಯೂರು, ಈಶ್ವರಮಂಗಲ, ಉಪ್ಪಿನಂಗಡಿ ಸೇರಿದಂತೆ ವಿವಿಧ ಕಡೆಗಳಲ್ಲಿ ಗಾಳಿ ಮಳೆಯಿಂದಾಗಿ ಹಾನಿ ಸಂಭವಿಸಿದೆ. ಎಪಿಎಂಸಿ ರೈಲ್ವೇ ಕ್ರಾಸಿಂಗ್ ರಸ್ತೆ ಬ್ಲಾಕ್ ಆಗಿದ್ದು ಅಂಡರ್ ಪಾಸ್ ರಸ್ತೆಯನ್ನೂ ಬಂದ್ ಮಾಡಲಾಗಿದ್ದರಿಂದ ಗಂಟೆಗಳ ಕಾಲ ವಾಹನ ಸವಾರರು ಸಮಸ್ಯೆ ಎದುರಿಸುವಂತಾಗಿತ್ತು ಎನ್ನುವ ದೂರು ವ್ಯಕ್ತವಾಗಿದೆ.ಬೈಪಾಸ್ ರಸ್ತೆ, ನರಿಮೊಗರು ಸೇರಿದಂತೆ ಕೆಲವೆಡೆ ಮರಗಳು ಉರುಳಿ ರಸ್ತೆಗೆ ಬಿದ್ದು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು ಎಂದು ಮಾಹಿತಿ ಲಭಿಸಿದೆ.ವಿದ್ಯುತ್ ಕಂಬಗಳು ಮುರಿದು ಬಿದ್ದು, ವಿದ್ಯುತ್ ಟ್ರಾನ್ಸ್-ರ್ಮರ್‌ಗಳಿಗೆ ಸಿಡಿಲಿನಿಂದ ಹಾನಿಯಾಗಿರುವುದರಿಂದ ತಡರಾತ್ರಿ ವರೆಗೂ ವಿದ್ಯುತ್ ಸಂಪರ್ಕ ಬಾರದೆ ಕತ್ತಲೆಯಲ್ಲೇ ಕಾಲಕಳೆಯುವಂತಾಗಿತ್ತು. ದುರಸ್ತಿ ಕಾರ್ಯ ನಡೆಯುತ್ತಿದೆ.