ಬೆಂಗಳೂರು: ನ್ಯಾಯಾಲಯಕ್ಕೆ ಹಾಗೂ ಪೊಲೀಸರಿಗೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಕೊಳ್ಳುವ ಯಾವುದೇ ರೀತಿಯ ಅಧಿಕಾರವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.
ಪ್ರಕರಣವೊಂದಕ್ಕೆ ಸಂಬಂಧಿಸಿ ಜಪ್ತಿ ಮಾಡಿಕೊಂಡಿರುವ ತನ್ನ ಪಾಸ್ಪೋರ್ಟ್ನ್ನು ಬಿಡುಗಡೆ ಮಾಡಲು ನಿರ್ದೇಶನ ನೀಡುವಂತೆ ನಗರದ ಪ್ರವೀಣ್ ಸುರೇಂದ್ರನ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿ, ಆದೇಶ ನೀಡಿದೆ. ಪಾಸ್ಪೋರ್ಟ್ನ್ನು ಅರ್ಜಿದಾರರಿಗೆ ಹಿಂದಿರುಗಿಸುವಂತೆ ವಿಚಾರಣಾ ನ್ಯಾಯಾಲಯಕ್ಕೆ ಆದೇಶಿಸಿರುವ ಹೈಕೋರ್ಟ್, ಅರ್ಜಿದಾರರು ತಮ್ಮ ವಿರುದ್ಧದ ಬಾಕಿ ಪ್ರಕರಣ ಇತ್ಯರ್ಥವಾಗುವವರೆಗೆ ದೇಶ ಬಿಟ್ಟು ಹೋಗಬಾರದು ಎಂದು ಆದೇಶಿಸಿದೆ.