ಅಕ್ರಮ ಮದ್ಯ ಮಾರಾಟ ಪ್ರಕರಣ – ಆರೋಪಿ ದೋಷಮುಕ್ತ

0

ಪುತ್ತೂರು:ಸುಮಾರು 7 ವರ್ಷಗಳ ಹಿಂದೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಎಂಬಲ್ಲಿ ಪತ್ತೆಯಾಗಿದ್ದ ಅಕ್ರಮ ಮದ್ಯ ಮಾರಾಟ ಪ್ರಕರಣದ ಆರೋಪಿ ಸುಂದರ ರೈ ಎಂಬವರನ್ನು ಪುತ್ತೂರಿನ ಪ್ರಧಾನ ಹಿರಿಯ ವ್ಯವಹಾರಿಕ ನ್ಯಾಯಾಧೀಶರು ಮತ್ತು ಹೆಚ್ಚುವರಿ ಮುಖ್ಯ ನ್ಯಾಯಿಕ ದಂಡಾಧಿಕಾರಿಯವರ ನ್ಯಾಯಾಲಯವು ನಿರಪರಾಧಿಯೆಂದು ಬಿಡುಗಡೆಗೊಳಿಸಿದೆ.

ಪುತ್ತೂರು ನಗರ ಪೊಲೀಸರು ತಮ್ಮ ಠಾಣಾ ಸರಹದ್ದಿನಲ್ಲಿ ರೌಂಡ್ಸ್ ಕರ್ತವ್ಯದಲ್ಲಿದ್ದ ಸಮಯ ದೊರೆತ ಖಚಿತ ಮಾಹಿತಿ ಮೇರೆಗೆ ಕೆಮ್ಮಿಂಜೆ ಗ್ರಾಮದ ಮುಕ್ರಂಪಾಡಿ ಬಸ್ ನಿಲ್ದಾಣದ ಬಳಿ ದಾಳಿ ನಡೆಸಿದ್ದರು. ಮುಕ್ರಂಪಾಡಿ ನಿವಾಸಿ ಸುಂದರ ರೈ ಎಂಬವರು ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡು ಅಲ್ಲಿದ್ದ ಅಕ್ರಮ ಮದ್ಯವನ್ನು ವಶಪಡಿಸಿಕೊಂಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಗೌಡ ಆರ್.ಪಿ.ಅವರು ಆರೋಪಿ ಸುಂದರ ರೈಯವರನ್ನು ನಿರಪರಾಧಿ ಎಂದು ತೀರ್ಮಾನಿಸಿ ಬಿಡುಗಡೆಗೊಳಿಸಿದ್ದಾರೆ. ಆರೋಪಿ ಪರ ವಕೀಲರಾದ ಮಹೇಶ್ ಕಜೆಯವರು ವಾದಿಸಿದ್ದರು.

LEAVE A REPLY

Please enter your comment!
Please enter your name here