ಯುವತಿ ಜತೆ ಅಸಭ್ಯ ವರ್ತನೆ ಪ್ರಕರಣ-ಯುವತಿ ಮನೆಯವರಿಗೆ ಧೈರ್ಯ ತುಂಬಿದ ಆಶಾ ತಿಮ್ಮಪ್ಪ

0

ವಿಟ್ಲ: ದ್ವಿಚಕ್ರ ವಾಹನದಲ್ಲಿ ಬಂದ ಯುವಕನೋರ್ವ ವಿಟ್ಲಕಸಬ ಗ್ರಾಮದ ಬನ ಎಂಬಲ್ಲಿ ನಡೆದುಕೊಂಡು ಹೋಗುತ್ತಿದ್ದ ಹಿಂದೂ ಯುವತಿಯ ಜೊತೆ ಅಸಭ್ಯವಾಗಿ ವರ್ತಿಸಿದ ಆರೋಪಿ ಯುವಕನನ್ನು ಕೂಡಲೇ ಬಂಧಿಸುವಂತೆ ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿದ್ದ ಆಶಾ ತಿಮ್ಮಪ್ಪ ರವರು ವಿಟ್ಲ ಠಾಣಾ ಪೊಲೀಸರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಮೊದಲು ಯುವತಿ ಮನೆಗೆ ತೆರಳಿದ ಅವರು ಯುವತಿ ಹಾಗೂ ಪೋಷಕರೊಂದಿಗೆ ಮಾತುಕತೆ ನಡೆಸಿ ಅವರಿಗೆ ಧೈರ್ಯ ತುಂಬಿದರು. ಬಡತನದಲ್ಲಿರುವ ಕುಟುಂಬಕ್ಕೆ ತನ್ನ ಕೈಲಾದ ಸಹಾಯ ನೀಡುವುದಾಗಿ ಭರವಸೆ ನೀಡಿರುವ ಅವರು, ಕುಟುಂಬಕ್ಕೆ ಆತ್ಮಸ್ಥೈರ್ಯ ತುಂಬುವಂತೆ ಸ್ಥಳೀಯರಲ್ಲಿ ಮನವಿ ಮಾಡಿಕೊಂಡರು.


ಬಳಿಕ ಪೊಲೀಸ್ ಠಾಣೆಗೆ ತೆರಳಿ ಪೊಲೀಸರ ಜೊತೆ ಮಾತುಕತೆ ನಡೆಸಿದರು. ಆರೋಪಿಗಳನ್ನು ತಕ್ಷಣ ಬಂಽಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದರು.

LEAVE A REPLY

Please enter your comment!
Please enter your name here