ಫಿಲೋಮಿನಾದಲ್ಲಿ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್ ಪಂದ್ಯಾಟ- ಆಳ್ವಾಸ್ ಮೂಡಬಿದ್ರೆ ಚಾಂಪಿಯನ್, ಅಲೋಶಿಯಸ್ ಮಂಗಳೂರು ರನ್ನರ್ಸ್

0

ಪುತ್ತೂರು: ಮಂಗಳೂರು ವಿಶ್ವವಿದ್ಯಾನಿಲಯ, ಮಂಗಳಗಂಗೋತ್ರಿ, ಮಂಗಳೂರು ಹಾಗೂ ಮಾಯಿದೆ ದೇವುಸ್ ಸಮೂಹ ಶಿಕ್ಷಣ ಸಂಸ್ಥೆಗಳಲ್ಲೊಂದಾದ ಸಂತ ಫಿಲೋಮಿನಾ ಕಾಲೇಜು ಇದರ ಜಂಟಿ ಆಶ್ರಯದಲ್ಲಿ ಕಾಲೇಜಿನ ಕ್ರೀಡಾಂಗಣದಲ್ಲಿ ಮೇ 12 ರಂದು ನಡೆದ ಮಂಗಳೂರು ವಿ.ವಿ ಅಂತರ್ ಕಾಲೇಜು ಮಹಿಳೆಯರ ಕ್ರಿಕೆಟ್(ಲೆದರ್ ಬಾಲ್) ಓವರ್ ಆರ್ಮ್ ಪಂದ್ಯಾಟದಲ್ಲಿ ಮೂಡಬಿದ್ರೆ ಆಳ್ವಾಸ್ ಕಾಲೇಜು ಚಾಂಪಿಯನ್ ಆಗಿದ್ದು, ಸಂತ ಅಲೋಶಿಯಸ್ ಕಾಲೇಜು ಮಂಗಳೂರು ರನ್ನರ್ಸ್ ಪ್ರಶಸ್ತಿ ಪಡೆದುಕೊಂಡಿತು.


ಸಂಜೆ ನಡೆದ ಆಳ್ವಾಸ್ ಕಾಲೇಜು ಮೂಡಬಿದ್ರೆ ಹಾಗೂ ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಇವುಗಳ ನಡುವಣ -ನಲ್ ಹೋರಾಟದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಅಲೋಶಿಯಸ್ ಕಾಲೇಜು ತಂಡದ ಮಹಿಳಾ ಬ್ಯಾಟರ್‌ಗಳ ಸಂಘಟಿತ ಹೋರಾಟದಿಂದ ನಿಗದಿತ ಎಂಟು ಓವರ್‌ಗಳಲ್ಲಿ 57 ರನ್‌ಗಳನ್ನು ಪೇರಿಸಿತ್ತು. ಬಳಿಕ ರನ್ ಬೆನ್ನಟ್ಟಿದ ಆಳ್ವಾಸ್ ಮೂಡಬಿದ್ರೆ ತಂಡದ ಮಹಿಳಾ ಬ್ಯಾಟರ್‌ಗಳ ಸಮಯೋಚಿತ ಬ್ಯಾಟಿಂಗ್‌ನಿಂದ ಏಳು ಚೆಂಡುಗಳು ಬಾಕಿ ಉಳಿದಿರುವಾಗಲೇ ವಿಜಯದ ರನ್‌ಗಳನ್ನು ಬಾರಿಸಿ ಚಾಂಪಿಯನ್ ಎನಿಸಿಕೊಂಡಿತು. ಈ ಮೊದಲು ನಡೆದ ಸೆಮಿ-ನಲ್ ಪಂದ್ಯಾಟದಲ್ಲಿ ಆಳ್ವಾಸ್ ಕಾಲೇಜು ಬ್ರಹ್ಮಾವರ ತಂಡವು ಎಸ್.ಎಂ.ಎಸ್ ಕಾಲೇಜು ತಂಡವನ್ನು ಮತ್ತು ಸೈಂಟ್ ಅಲೋಶಿಯಸ್ ಕಾಲೇಜು ತಂಡವು ಸೈಂಟ್ ಆಗ್ನೇಸ್ ಕಾಲೇಜು ತಂಡವನ್ನು ಮಣಿಸಿ -ನಲ್ ಹಂತಕ್ಕೆ ಅರ್ಹತೆ ಪಡೆದಿತ್ತು.


ಸಮಾರೋಪ:
ಸಂಜೆ ನಡೆದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿದ ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕ ಡಾ|ಜೆರಾಲ್ಡ್ ಸಂತೋಷ್ ಡಿ’ಸೋಜರವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿ, ಕ್ರಿಕೆಟ್ ಎಂಬುದು ಮೈಂಡ್ ಗೇಮ್. ಇಲ್ಲಿ ತಾಂತ್ರಿಕ ನೈಪುಣ್ಯತೆ, ಟೈಮಿಂಗ್ಸ್, ದೈಹಿಕ ಕ್ಷಮತೆ, ನಿರಂತರ ಅಭ್ಯಾಸ ಬಹಳ ಮುಖ್ಯ ಜೊತೆಗೆ ಪಂದ್ಯಾಟ ಹೇಗೆ ಜಯಿಸುವುದು ಎನ್ನುವ ಜ್ಞಾನಾಶಕ್ತಿ ಬಹಳ ಮುಖ್ಯವಾಗುತ್ತದೆ ಎಂದರು.


ವೇದಿಕೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ವೀಕ್ಷಕ, ಮಡಂತ್ಯಾರು ಸೆಕ್ರೇಡ್ ಹಾರ್ಟ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಡಾ|ಪ್ರಕಾಶ್ ಡಿ’ಸೋಜ, ಫಿಲೋಮಿನಾ ಕಾಲೇಜಿನ ವಾಣಿಜ್ಯ ಶಾಸ ವಿಭಾಗದ ಉಪನ್ಯಾಸಕ ಪ್ರಶಾಂತ್ ರೈ, ಸೈಂಟ್ ಅಲೋಶಿಯಸ್ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕಿ ನಿತಿಶಾ, ತರಬೇತುದಾರ ಕೃಷ್ಣಾತುಂಗ, ಆಳ್ವಾಸ್ ಕಾಲೇಜಿನ ಸಹಾಯಕ ದೈಹಿಕ ಶಿಕ್ಷಣ ನಿರ್ದೇಶಕಿ ಹಂಸಾವತಿ, ಫಿಲೋಮಿನಾ ಕಾಲೇಜಿನ ಕ್ರಿಕೆಟ್ ತರಬೇತುದಾರ ಶ್ರೇಯಸ್ ಆನಂದ್ ಉಪಸ್ಥಿತರಿದ್ದರು. ಫಿಲೋಮಿನಾ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಎಲ್ಯಾಸ್ ಪಿಂಟೋ ಸ್ವಾಗತಿಸಿ, ವಿಜೇತರ ಪಟ್ಟಿ ವಾಚಿಸಿದರು. ಫಿಲೋಮಿನಾ ಪದವಿ ಪೂರ್ವ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ರಾಜೇಶ್ ಮೂಲ್ಯ ಸಹಕರಿಸಿದರು.

ಟೂರ್ನಿಯ ಉತ್ತಮ ಮಹಿಳಾ ಬ್ಯಾಟರ್ ಆಗಿ ಅಲೋಶಿಯಸ್ ಕಾಲೇಜು ತಂಡದ ದಿವ್ಯಾ, ಉತ್ತಮ ಬೌಲರ್ ಆಗಿ ಅಲೋಶಿಯಸ್ ಕಾಲೇಜು ತಂಡದ ತನುಶಾ, ಉತ್ತಮ ಸರ್ವಾಂಗೀಣ ಆಟಗಾರ್ತಿಯಾಗಿ ಆಳ್ವಾಸ್ ತಂಡದ ಪಲ್ಲವಿ ಆಯ್ಕೆಯಾದರು. ಟೂರ್ನಿಯಲ್ಲಿ ವಿಜೇತ ತಂಡ ಆಳ್ವಾಸ್ ಮೂಡಬಿದ್ರೆ, ರನ್ನರ್ಸ್ ತಂಡ ಸೈಂಟ್ ಅಲೋಶಿಯಸ್ ಕಾಲೇಜು ಮಂಗಳೂರು ಅಲ್ಲದೆ ಸೈಂಟ್ ಆಗ್ನೇಸ್ ಕಾಲೇಜು ಮಂಗಳೂರು, ಯೂನಿವರ್ಸಿಟಿ ಕಾಲೇಜು ಮಂಗಳೂರು, ಎಸ್.ಎಂ.ಎಸ್ ಕಾಲೇಜು ಬ್ರಹ್ಮಾವರ್ ಹೀಗೆ ಐದು ತಂಡಗಳು ಭಾಗವಹಿಸಿತ್ತು.

LEAVE A REPLY

Please enter your comment!
Please enter your name here