ಮಂಗಳೂರು ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ 

0

ಪುತ್ತೂರು: ಮಂಗಳೂರು ಮೂಡಬಿದರೆಯ ರಾಷ್ಡ್ರೀಯ ಹೆದ್ದಾರಿಗೆ ತಾಗಿಕೊಂಡು  ಕುಲಶೇಖರದಲ್ಲಿರುವ ಶ್ರೀ ವೀರನಾರಾಯಣ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಮೇ 14 ಕ್ಕೆ ಪುತ್ತೂರಿನಿಂದ ಹೊರೆಕಾಣಿಕೆ ಸಮರ್ಪಣೆ ಮೆರವಣಿಗೆ ನಡೆಯಿತು.

ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ ತೆಂಗಿನ ಕಾಯಿ ಒಡೆಯುವ ಮೂಲಕ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮಂಗಳೂರು ಪದವು ಗ್ರಾಮದ ಕುಲಶೇಖದಲ್ಲಿರುವ ಇತಿಹಾಸ ಪ್ರಸಿದ್ಧ ಶ್ರೀ ವೀರನಾರಾಯಣ ಕ್ಷೇತ್ರವು ಸುಮಾರು 800 ವರ್ಷಗಳ ಪುರಾತನ ಇತಿಹಾಸವುಳ್ಳ ದೇವಾಲಯವಾಗಿದ್ದು ಇದೀಗ ಜೀರ್ಣೋದ್ದಾರಗೊಂಡು ಮೇ 14 ರಿಂದ 25 ರ ತನಕ ಬ್ರಹ್ಮಕಲಶೋತ್ಸವ ನಡೆಯಲಿರುವ ಹಿನ್ನಲೆಯಲ್ಲಿ ವಿವಿಧ ಕಡೆಯಿಂದ ಹೊರೆಕಾಣಿಕೆ ಮೆರವಣಿಗೆ ಮಹಾಲಿಂಗೇಶ್ವರ ದೇವಳದ ಬಳಿ ಬಂದು ಅಲ್ಲಿಂದ ಜೊತೆಯಾಗಿ ಮೆರವಣಿಗೆ ನಡೆಯಿತು.‌ ಹೊರೆಕಾಣಿಕೆ ಪುತ್ತೂರು ಸಮಿತಿ ಸಂಚಾಲಕ ಡಾ. ಚಂದ್ರಶೇಖರ್, ಸಹಸಂಚಾಲಕರಾದ ಯಶವಂತ ಪಿ ಬಿ, ಜನಾರ್ದನ ಸಿಟಿಗುಡ್ಡೆ,ಕುಲಾಲ ಸಮಾಜ ಸೇವಾ ಸಂಘದ ಅಧ್ಯಕ್ಷ ನವೀನ್ ಕುಲಾಲ್, ಸಂಘದ ಕಾರ್ಯದರ್ಶಿ ಜನಾರ್ದನ ಸಾರ್ಯ ಸಮಿತಿ ವಿವಿದ ಪ್ರಮುಖರು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here