ಪುತ್ತೂರು: ಇತಿಹಾಸ ಪ್ರಸಿದ್ದ ಪುತ್ತೂರು ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 14ರಂದು ಪ್ರತಿಷ್ಠಾ ವರ್ಧಂತ್ಯುತ್ಸವ ನಡೆಯಿತು.
ದೇವಳದ ತಂತ್ರಿ ಬ್ರಹ್ಮಶ್ರೀ ವೇ.ಮೂ.ಕುಂಟಾರು ರವೀಶ ತಂತ್ರಿಯವರ ನೇತೃತ್ವದಲ್ಲಿ ಬ್ರಹ್ಮಶ್ರೀ ವೇ.ಮೂ. ಗುರು ತಂತ್ರಿಯವರು ಪೂಜಾವಿಧಿ ವಿಧಾನ ನೆರವೇರಿಸಿದರು. ಬೆಳಿಗ್ಗೆ ಗಂಟೆ 7ರಿಂದ ಪ್ರಾರ್ಥನೆ, 108 ಕಾಯಿ ಗಣಪತಿ ಹೋಮ, ಚಂಡಿಕಾ ಹೋಮ, ಶತರುದ್ರಾ ಕಾರ್ಯಕ್ರಮ ನಡೆಯಿತು. ರಾತ್ರಿ ಗಂಟೆ 7.30ಕ್ಕೆ ಪೂಜೆಯ ಬಳಿಕ ದೇವರ ಉತ್ಸವ ಹೊರಟು ಹೊರಾಂಗಣದಲ್ಲಿ ಪಲ್ಲಕ್ಕಿ ಉತ್ಸವ, ಬಂಡಿ ಉತ್ಸವ ನಡೆಯಿತು. ಪ್ರತಿಷ್ಠಾ ಮಹೋತ್ಸವದ ಅಂಗವಾಗಿ 108 ಕಾಯಿ ಗಣಪತಿ ಹೋಮ, ಶತರುದ್ರಾ, ಚಂಡಿಕಾ ಹೋಮ, ಬಂಡಿ ಉತ್ಸವ, ಪಲ್ಲಕ್ಕಿ ಉತ್ಸವ ನಡೆಯಿತು. ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೇಶವಪ್ರಸಾದ್ ಮುಳಿಯ, ಸದಸ್ಯರಾದ ರವೀಂದ್ರನಾಥ ರೈ ಬಳ್ಳಮಜಲು, ಶೇಖರ್ ನಾರಾವಿ, ರಾಮದಾಸ್ ಗೌಡ, ರಾಮಚಂದ್ರ ಕಾಮತ್, ಬಿ.ಐತ್ತಪ್ಪ ನಾಯ್ಕ್, ವೀಣಾ ಬಿ.ಕೆ, ಡಾ. ಸುಧಾ ಎಸ್ ರಾವ್, ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಭಂಡಾರಿ ಎಚ್, ವಾಸ್ತು ಇಂಜಿನಿಯರ್ ಪಿ.ಜಿ.ಜಗನ್ನಿವಾಸ ರಾವ್ ಸಹಿತ ಭಕ್ತರು ಉಪಸ್ಥಿತರಿದ್ದರು.