ಬಿಜೆಪಿ ನಾಯಕರಿಬ್ಬರಿಗೆ ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ – ಬಿಜೆಪಿಯಿಂದ ಪ್ರತಿಭಟನೆ-ತಹಶೀಲ್ದಾರ್‌ಗೆ ಮನವಿ

0

ಅಗೌರವ ತರುವ ಕೆಲಸದ ಹಿಂದೆ ಯಾರಿದ್ದಾರೆ ಎಂಬುದನ್ನು ತನಿಖೆ ಮಾಡಬೇಕು – ಸಂಜೀವ ಮಠಂದೂರು ಆಗ್ರಹ

ಪುತ್ತೂರು: ಬಿಜೆಪಿ ನಾಯಕರಿಬ್ವರಾದ ರಾಜ್ಯಾ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಹಾಲಿ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ‌ ಕೋರಿ ಮೇ 15 ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವುದನ್ನು ವಿರೋಧಿಸಿ ಪುತ್ತೂರು ಬಿಜೆಪಿಯಿಂದ ಕೃತ್ಯ ಎಸಗಿದ ಆರೋಪಿಗಳನ್ನು ತಕ್ಷಣ ಬಂಧಿಸುವಂತೆ ಆಗ್ರಹಿಸಿ ಪೊಲೀಸ್ ಠಾಣೆಗೆ ದೂರು ನೀಡಿ, ಪ್ರತಿಭಟನೆ ನಡೆಸಿದರು.


ಪೊಲೀಸ್ ಠಾಣೆಗೆ ದೂರು ನೀಡಿದ ಬಳಿಕ ತಾಲೂಕು ಆಡಳಿತ ಸೌಧದ ಎದುರು ಪ್ರತಿಭಟನೆ ನಡೆಯಿತು. ಪ್ರತಿಭಟನೆ ಬಳಿಕ ತಹಶೀಲ್ದಾರ್‌ ಗೆ ಮನವಿ ಮಾಡಿದರು. ಮಾಜಿ ಶಾಸಕ ಸಂಜೀವ ಮಠಂದೂರು, ಆಶಾ ತಿಮ್ಮಪ್ಪ, ಚನಿಲ ತಿಮ್ಮಪ್ಪ ಶೆಟ್ಟಿ, ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ನಗರ ಮಂಡಲದ ಅಧ್ಯಕ್ಷ ಪಿ ಜಿ ಜಗನ್ನಿವಾಸ ರಾವ್, ಕೆ ಜೀವಂಧರ್ ಜೈನ್, ಚಂದ್ರಶೇಖರ್ ರಾವ್ ಬಪ್ಪಳಿಗೆ, ವಿದ್ಯಸ ಗೌರಿ, ರಾಮ್ ದಾಸ್ ಹಾರಾಡಿ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here