ಪುತ್ತೂರು ತಾಲೂಕು ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ರಾಜೀನಾಮೆ

0

ಪುತ್ತೂರು: ತಾಲೂಕು ಬಿಜೆಪಿ ಯುವ ಮೋರ್ಚಾ ಕಾರ್ಯದರ್ಶಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿ ಮತ್ತು ಪುತ್ತೂರಿನಲ್ಲಿ ಪಕ್ಷದ ಕಾರ್ಯಕರ್ತರನ್ನು ಕಡೆಗಣಿಸಿದ್ದು ಮನಸ್ಸಿಗೆ ಬೇಸರವಾಗಿದೆ. ಕೆಲನಾಯಕರ ವರ್ತನೆಯಿಂದ ಬೇಸತ್ತು ರಾಜೀನಾಮೆ ನೀಡುವುದಾಗಿ ಬೂತ್ ಕಾರ್ಯದರ್ಶಿ ಮತ್ತು ತಾಲೂಕು ಯುವ ಮೋರ್ಚಾ ಕಾರ್ಯದರ್ಶಿ ನೆಟ್ಟಣಿಗೆ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ ಎಂ ಚಂದ್ರಹಾಸ ಹೇಳಿದ್ದಾರೆ.‌

ಗ್ರಾಮ ಪಂಚಾಯತ್ ಸದಸ್ಯ ಸ್ಥಾನಕ್ಕೂ ರಾಜೀನಾಮೆ ನೀಡಿ ಸ್ವತಂತ್ರವಾಗಿ ಮತ್ತೊಮ್ಮೆ ಸ್ಪರ್ಧಿಸುತ್ತೇನೆ. ಪುತ್ತೂರಿನಲ್ಲಿ ಬಿಜೆಪಿ ಹಿಂದುತ್ವವನ್ನು ಸೋಲಿಸಿದ ಕಾರಣ ರಾಜೀನಾಮೆ ನೀಡುವುದಾಗಿ ಅವರು ಸ್ಪಷ್ಟಪಡಿಸಿದ್ದಾರೆ.

LEAVE A REPLY

Please enter your comment!
Please enter your name here