ಬಿಜೆಪಿ ನಾಯಕರಿಬ್ಬರಿಗೆ ಶ್ರದ್ಧಾಂಜಲಿ ಬ್ಯಾನರ್ ಅಳವಡಿಕೆ – 8 ಗಂಟೆಯೊಳಗೆ ಆರೋಪಿಗಳಿಬ್ಬರನ್ನು ಬಂಧಿಸಿದ ಪುತ್ತೂರು ಪೊಲೀಸರು

0

ಪುತ್ತೂರು: ಬಿಜೆಪಿ ನಾಯಕರಿಬ್ಬರಾದ ರಾಜ್ಯಾ ಬಿಜೆಪಿ ಅಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಮತ್ತು ಕೇಂದ್ರದ ಮಾಜಿ ಸಚಿವ ಬೆಂಗಳೂರು ಉತ್ತರದ ಸಂಸದ ಡಿ ವಿ ಸದಾನಂದ ಗೌಡ ಅವರಿಗೆ ಶ್ರದ್ಧಾಂಜಲಿ‌ ಕೋರಿ ಮೇ 15 ರಂದು ಪುತ್ತೂರು ಬಸ್ ನಿಲ್ದಾಣದ ಬಳಿ ಬ್ಯಾನರ್ ಅಳವಡಿಸಿರುವ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪುತ್ತೂರು ನಗರ ಠಾಣಾ ಪೊಲೀಸರು ಘಟನೆ ಬೆಳಕಿಗೆ ಬಂದ 8 ಗಂಟೆಯೊಳಗೆ ಬಂಧಿಸಿದ್ದಾರೆ.


ನರಿಮೊಗರು ನಿವಾಸಿಗಳಾದ ವಿಶ್ವನಾಥ್ ಮತ್ತು ಮಾಧವ ಎಂಬವರು ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here