ಉಪ್ಪಿನಂಗಡಿ: ನೆಕ್ಕಿಲಾಡಿಯಲ್ಲಿ ಕಾಂಗ್ರೆಸ್ ವಿಜಯೋತ್ಸವ

0

ಉಪ್ಪಿನಂಗಡಿ: ರಾಜ್ಯದಲ್ಲಿ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವು ಜಯಭೇರಿ ಬಾರಿಸಿದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ 34 ನೆಕ್ಕಿಲಾಡಿ ವಲಯದ ವತಿಯಿಂದ ಮೇ 15ರಂದು ವಿಜಯೋತ್ಸವ ಮೆರವಣಿಗೆ ನಡೆಯಿತು.


ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ. ರಾಜಾರಾಮ್ ಕೆ.ಬಿ. ಮಾತನಾಡಿ, ಬಿಜೆಪಿಯ ಭ್ರಷ್ಟ ಆಡಳಿತದಿಂದ ಕಂಗೆಟ್ಟ ಮತದಾರ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಅಧಿಕಾರಕ್ಕೆ ಬರುವಲ್ಲಿ ಶ್ರಮಿಸಿದ್ದಾನೆ. ಕಾರ್ಯಕರ್ತರ ಜವಾಬ್ದಾರಿ ಇನ್ನೂ ಹೆಚ್ಚಾಗಿದ್ದು, ಪ್ರತಿ ಬೂತ್‌ನಲ್ಲಿಯೂ ಕಾಂಗ್ರೆಸ್ ಅನ್ನು ಇನ್ನಷ್ಟು ಗಟ್ಟಿಗೊಳಿಸುವ ಪ್ರಯತ್ನ ಮಾಡಬೇಕು ಎಂದರು.


ವಿಟ್ಲ- ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುರ್ರಹ್ಮಾನ್ ಯುನಿಕ್ ಮಾತನಾಡಿ, 34 ನೆಕ್ಕಿಲಾಡಿಯ ನಾಲ್ಕು ಬೂತ್‌ನಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿಯಾದ ಅಶೋಕ್ ಕುಮಾರ್ ರೈಯವರು ಉಳಿದ ಅಭ್ಯರ್ಥಿಗಳಿಗಿಂತ ಹೆಚ್ಚಿನ ಮತಗಳನ್ನು ಪಡೆದಿದ್ದಾರೆ. ವಲಯಾಧ್ಯಕ್ಷೆ ಹಾಗೂ ಪಕ್ಷದ ಎಲ್ಲಾ ಪದಾಧಿಕಾರಿಗಳು, ನಾಯಕರು ಮತ್ತು ಕಾರ್ಯಕರ್ತರ ಅವಿರತ ಶ್ರಮವೇ ಈ ಗೆಲುವಿಗೆ ಕಾರಣ. ಅಶೋಕ್ ಕುಮಾರ್ ರೈಯವರ ಶಾಸಕತ್ವದ ಅವಧಿಯಲ್ಲಿ ಪುತ್ತೂರು ವಿಧಾನ ಸಭಾ ಕ್ಷೇತ್ರವು ಇನ್ನಷ್ಟು ಅಭಿವೃದ್ಧಿ ಕಾಣಲಿದೆ ಎಂದರು.


34 ನೆಕ್ಕಿಲಾಡಿಯಿಂದ ಆರಂಭವಾದ ವಿಜಯೋತ್ಸವ ಮೆರವಣಿಗೆಯು ಸುಭಾಶ್‌ನಗರ, ಕರ್ವೇಲ್, ಶಾಂತಿನಗರ, ಬೀತಲಪ್ಪು, ಮೈಂದನಡ್ಕ ಸೇರಿದಂತೆ ಎಲ್ಲಾ ವಾರ್ಡ್‌ಗಳಲ್ಲಿ ಸಂಚರಿಸಿ ಬಳಿಕ ಉಪ್ಪಿನಂಗಡಿಗೆ ಆಗಮಿಸಿ ವಾಪಸ್ 34 ನೆಕ್ಕಿಲಾಡಿಗೆ ತೆರಳಿ ಸಮಾಪ್ತಿಗೊಂಡಿತು. ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.


ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ನ 34 ನೆಕ್ಕಿಲಾಡಿಯ ವಲಯಾಧ್ಯಕ್ಷೆ ಅನಿ ಮಿನೇಜಸ್, ಕಾರ್ಯದರ್ಶಿ ಕಲಂದರ್ ಶಾಫಿ, ವಿಟ್ಲ- ಉಪ್ಪಿನಂಗಡಿ ಯುವ ಕಾಂಗ್ರೆಸ್ ಅಧ್ಯಕ್ಷ ಫಾರೂಕ್ ಪೆರ್ನೆ, ನಮ್ಮೂರು- ನೆಕ್ಕಿಲಾಡಿ ಅಧ್ಯಕ್ಷ ಜತೀಂದ್ರ ಶೆಟ್ಟಿ, ಪಕ್ಷದ ನಾಯಕರಾದ ಡಾ. ರಘು ಬೆಳ್ಳಿಪ್ಪಾಡಿ, ಜಯಪ್ರಕಾಶ್ ಬದಿನಾರು, ಶರೀಖ್ ಅರಫಾ, ಫಯಾಝ್ ನೆಕ್ಕಿಲಾಡಿ, ಪುತ್ತುಮೋನು ಕರ್ವೇಲ್, ನವಾಝ್ ಕರ್ವೇಲ್ ಸಿಹಾಕ್, ಜಯಶೀಲ ಶೆಟ್ಟಿ, ಯು.ಟಿ. ಫಯಾಜ್, ಅಶ್ರಫ್ ಅಂಬೊಟ್ಟು, ನಝೀರ್ ನೆಕ್ಕಿಲಾಡಿ, ಅಶ್ರಫ್ ಆದರ್ಶನಗರ, ಆನಂದ ಸಾಂತ್ಯಡ್ಕ, ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here