





ಸುಳ್ಯ : ಸುಳ್ಯ ವಿಧಾನ ಸಭಾ ಕ್ಷೇತ್ರದ ಭಾರತೀಯ ಜನತಾ ಪಾರ್ಟಿಯ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯ ರವರ ಗೆಲುವಿನ ಹಿನ್ನೆಲೆಯಲ್ಲಿ ಮೇ.16(ಇಂದು) ಬೆಳಿಗ್ಗೆ 10.30 ರಿಂದ ಸುಳ್ಯ ಕೇರ್ಪಳ ಬೂಡು ಬಂಟರ ಭವನದಲ್ಲಿ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭವು ನಡೆಯಲಿರುವುದು.


ಪಕ್ಷದ ಕಾರ್ಯಕರ್ತರಿಗೆ, ಬೂತ್ ಮಟ್ಟದ ಕಾರ್ಯಕರ್ತರು, ಬೂತ್ ಮಟ್ಟದ ಪೇಜ್ ಪ್ರಮುಖರು, ಬೂತ್ ಏಜೆಂಟರು,ಶಕ್ತಿ ಕೇಂದ್ರ, ಮಹಾಶಕ್ತಿ ಕೇಂದ್ರ, ಮಂಡಲದ ಸದಸ್ಯರು, ಜಿಲ್ಲೆ ಹಾಗೂ ತಾಲೂಕಿನ ಹಿರಿಯ ಕಿರಿಯ ಕಾರ್ಯಕರ್ತರು ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಬಿಜೆಪಿ ಮಂಡಲ ಹಾಗೂ ಚುನಾವಣಾ ನಿರ್ವಹಣಾ ಸಮಿತಿ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.












