ಪುತ್ತೂರು: ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿದ್ದ ಪುತ್ತೂರು ಮೂಲದ ಅರುಣ್ ಶ್ಯಾಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಮೇ 15ರಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ರಾಜೀನಾಮೆ ನೀಡಿದ್ದಾರೆ.
ಹೈಕೋರ್ಟ್ ನ ಹಿರಿಯ ನ್ಯಾಯವಾದಿಯಾಗಿರುವ ಅರುಣ್ ಶ್ಯಾಮ್ ಅವರನ್ನು ಎರಡೂವರೇ ವರ್ಷದ ಹಿಂದೆ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಕರ್ನಾಟಕ ಸರಕಾರದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಆಗಿ ನೇಮಿಸಲಾಗಿತ್ತು. ಇದೀಗ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್‌ಗೆ ಬಹುಮತ ಬರುತ್ತಿದ್ದಂತೆ ಅರುಣ್ ಶ್ಯಾಮ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯದ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ಅವರು ಮೇ 14ರಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.