ಕಾಂಗ್ರೆಸ್ ಮುಖಂಡ ಎಂ.ಎಸ್ ಮಹಮ್ಮದ್ ಅವರನ್ನು ಎಂ.ಎಲ್.ಸಿ ಮಾಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಪ್ರಾರಂಭ

0

ಪುತ್ತೂರಿನ: ಕಾಂಗ್ರೆಸ್ ಮುಖಂಡ ಎಂ.ಎಸ್ ಮಹಮ್ಮದ್ ಅವರಿಗೆ ವಿಧಾನ ಪರಿಷತ್ ಸ್ಥಾನ ನೀಡುವಂತೆ ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ಶುರುವಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ವಾಟ್ಸಪ್ ಗ್ರೂಪ್ ರಚಿಸಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ಅಭಿಯಾನ ಶುರು ಮಾಡಿದ್ದು ನಿಷ್ಠಾವಂತ ಕಾಂಗ್ರೆಸ್ ನಾಯಕ ಎಂಎಸ್ ಮಹಮ್ಮದ್ ಅವರಿಗೆ ಈ ಬಾರಿ ವಿಧಾನ ಪರಿಷತ್ತಿನಲ್ಲಿ ಅವಕಾಶ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

ವಿಟ್ಲ ಮೂಲದವರಾದ ಎಂ.ಎಸ್ ಮಹಮ್ಮದ್ ಅವರು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಗಿ, ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ವಿವಿಧ ಹುದ್ದೆಗಳನ್ನು ಅಲಂಕರಿಸಿರುವ ಇವರು ಕಾಂಗ್ರೆಸ್ ಪಕ್ಷದ ಪ್ರಬಲ ಭಾಷಣಗಾರರಾಗಿಯೂ ಗುರುತಿಸಿಕೊಂಡಿದ್ದಾರೆ.

ಅನೇಕ ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ತೊಡಗಿರುವ ಇವರಿಗೆ ಸೂಕ್ತ ಸ್ಥಾನಮಾನಗಳು ಇದುವರೆಗೂ ಸಿಕ್ಕಿಲ್ಲ ಎನ್ನುವುದು ಅವರ ಬೆಂಬಲಿಗರ ಆರೋಪವಾಗಿದ್ದು ಈ ಬಾರಿ ಕಾಂಗ್ರೆಸ್ ಸರ್ಕಾರ ರಚನೆಯಾಗಿದ್ದು ವಿಧಾನ ಪರಿಷತ್ ಸದಸ್ಯರಾಗಿ ಇವರಿಗೆ ಅವಕಾಶ ನೀಡಬೇಕು ಎಂದು ಒತಾಯಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸಂದೇಶ

LEAVE A REPLY

Please enter your comment!
Please enter your name here