ಸುಳ್ಯ: ಬಿಜೆಪಿ ವತಿಯಿಂದ ಕಾರ್ಯಕರ್ತರಿಗೆ ಅಭಿನಂದನಾ ಸಭೆ

0

ಪುತ್ತೂರು: ಸುಳ್ಯ ಮಂಡಲ ಭಾರತೀಯ ಜನತಾ ಪಾರ್ಟಿ ವತಿಯಿಂದ ಸುಳ್ಯ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಅಭೂತಪೂರ್ವ ಗೆಲುವಿಗೆ ಕಾರಣಕರ್ತರಾದ ಕಾರ್ಯಕರ್ತರಿಗೆ ಅಭಿನಂದನಾ ಸಭೆ ಮಂಗಳವಾರ ಸುಳ್ಯದ ಬೂಡು ಕೇರ್ಪಳ ಬಂಟರ ಭವನದಲ್ಲಿ ನಡೆಯಿತು.

ಸುಳ್ಯ ಮಂಡಲ ಅಧ್ಯಕ್ಷ ಹರೀಶ್ ಕಂಜಿಪಿಲಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್ ಪ್ರಧಾನ ಭಾಷಣ ನೆರವೇರಿಸಿದರು. ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ ಮೂಡುಬಿದಿರೆ, ಮಾಜಿ ಶಾಸಕ ಸಂಜೀವ ಮಠಂದೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಾಮದಾಸ್ ಬಂಟ್ವಾಳ, ಕಸ್ತೂರಿ ಪಂಜ, ಪ್ರಮುಖರಾದ ರಾಧಾಕೃಷ್ಣ ಬೂಡಿಯೂರು, ಆಶಾ ತಿಮ್ಮಪ್ಪ, ವೆಂಕಟ್ ವಳಲಂಬೆ, ಮುಳಿಯ ಕೇಶವ ಭಟ್, ಸುಭೋದ್ ಶೆಟ್ಟಿ ಮೇನಾಲ, ಎಸ್.ಎನ್.ಮನ್ಮಥ, ಗುರುದತ್ ನಾಯಕ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಎ.ವಿ.ತೀರ್ಥರಾಮ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ವಿನಯಕುಮಾರ್ ಕಂದಡ್ಕ ವಂದೇ ಮಾತಂ ಹಾಡಿದರು. ರಾಕೇಶ್ ರೈ ಕೆಡೆಂಜಿ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರು, ಮುಖಂಡರು, ವಿವಿಧ ಪದಾಧಿಕಾರಿಗಳು, ಸೇರಿದಂತೆ ಕಾರ್ಯಕರ್ತರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here