ಮೇ17ರಿಂದ ಮೂಲ ದಾಖಲೆಗಳ ಪರಿಶೀಲನೆ

0

ಮಂಗಳೂರು:ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆಗಾಗಿ ಅಭ್ಯರ್ಥಿಗಳ ಮೂಲ ಪ್ರಮಾಣ ಪತ್ರಗಳನ್ನು ಮೇ 17ರಿಂದ ಮೇ 19 ರವರೆಗೆ ಸ್ವೀಕರಿಸಲಾಗುವುದು.

ಮೇ 17ರಂದು ಸಮಾಜ ವಿಜ್ಞಾನ, ಮೇ 18ರಂದು ಗಣಿತ ವಿಜ್ಞಾನ, ಮೇ 19 ರಂದು ಆಂಗ್ಲ ಹಾಗೂ ಜೀವಶಾಸ್ತ್ರ ವಿಷಯಕ್ಕೆ ಸಂಬಂಧಿಸಿದ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಮೂಲ ದಾಖಲೆಗಳ ನೈಜತೆ ಪರಿಶೀಲನೆಯು ಬೆಳಗ್ಗೆ 10ಗಂಟೆಗೆ ಮಂಗಳೂರಿನ ಲೇಡಿಹಿಲ್ ವಿಕ್ಟೋರಿಯಾ ಪ್ರೌಢಶಾಲೆಯಲ್ಲಿ ನಡೆಯಲಿದೆ. ಅಭ್ಯರ್ಥಿಗಳು ಮೂಲ ದಾಖಲೆಗಳೊಂದಿಗೆ ಎಲ್ಲಾ ಪ್ರಮಾಣ ಪತ್ರಗಳ ದೃಡೀಕೃತ ಪ್ರತಿಯನ್ನು ದ್ವಿಪ್ರತಿಯಲ್ಲಿ ತರುವಂತೆ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here