ಗ್ರಾಮಕರಣಿಕ, ಸರ್ವೆಯರ್ ಹುದ್ದೆಗಳಲ್ಲಿ ಸ್ಥಳೀಯರ ನೇಮಕ-ಜಿಲ್ಲಾಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಮಾತುಕತೆ

0

ಪುತ್ತೂರು: ದ.ಕ ಜಿಲ್ಲೆ ಸೇರಿದಂತೆ ಪುತ್ತೂರು ವಿಧಾನಸಬಾ ಕ್ಷೇತ್ರ ವ್ಯಾಪ್ತಿಯಲ್ಲಿ ಖಾಲಿ ಇರುವ ಗ್ರಾಮಕರಣಿಕ ಮತ್ತು ಸರ್ವೆಯರ್ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸ್ಥಳೀಯರನ್ನು ನೇಮಕಾತಿ ಮಾಡುವಂತೆ ಪುತ್ತೂರು ಶಾಸಕರಾದ ಅಶೋಕ್ ರೈ ಯವರು ದ.ಕ ಜಿಲ್ಲಾಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದಾರೆ.

ಕಂದಾಯ ಇಲಾಖೆ ವ್ಯಾಪ್ತಿಗೆ ಒಳಪಡುವ ಗ್ರಾಮಕರಣಿಕ ಮತ್ತು ಸರ್ವೆಯರ್ ಹುದ್ದೆಗಳು ಅನೇಕ ಕಡೆಗಳಲ್ಲಿ ಖಾಲಿ ಇದ್ದು ಇದರಿಂದ ಜನರಿಗೆ ಸಮಸ್ಯೆಯಾಗುತ್ತಿದೆ. ಕಂದಾಯ ಇಲಾಖೆಯ ಅನೇಕ ಕಡತಗಳು ವಿಲೇವಾರಿಯಾಗದೆ ತಾಲೂಕು ಕಚೇರಿಯಲ್ಲಿ ಕೊಳೆಯುತ್ತಿದೆ. ಸಿಬ್ಬಂಧಿಗಳ ಸಮಸ್ಯೆಯೇ ಇದಕ್ಕೆ ಮೂಲ ಕಾರಣವಾಗಿದೆ. ಭ್ರಷ್ಟಾಚಾರಮುಕ್ತ ಕಂದಾಯ ಇಲಾಖೆಯನ್ನಾಗಿ ಪರಿವರ್ತಿಸುವಲ್ಲಿ ಸಿಬ್ಬಂಧಿಗಳ ನೇಮಕವೂ ಅಗತ್ಯವಾಗಿದೆ. ಭ್ರಷ್ಟಾಚಾರವನ್ನು ಯಾವುದೇ ಕಾರಣಕ್ಕೂ ನಾನು ಸಹಿಸುವ ಪ್ರಶ್ನೆಯೇ ಇಲ್ಲ. ಭ್ರಷ್ಟಾಚಾರ ಮಾಡುವ ಅಧಿಕಾರಿಗಳನ್ನು ಎತ್ತಂಗಡಿ ಮಾಡಬೇಕಾಗುತ್ತದೆ ಎಂದು ಜಿಲ್ಲಾಧಿಕಾರಿಗಳ ಬಳಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಶಾಸಕ ಅಶೋಕ್ ರೈ ಖಾಲಿ ಇರುವ ಹುದ್ದೆಗೆ ಸ್ಥಳೀಯರನ್ನು ನೇಮಕ ಮಾಡಬೇಕಾದ ಅನಿವಾರ್ಯತೆ ಇದೆ. ವಿದ್ಯಾವಂತ ನಿರುದ್ಯೋಗಿಗಳಿಗೆ ಹುದ್ದೆಯೂ ಸಿಕ್ಕಂತಾಗುತ್ತದೆ. ಮುಲಾಜಿಲ್ಲದೆ ಭ್ರಷ್ಟಾಚಾರ ಮಾಡುವ ಯಾವುದೇ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದು, ಭ್ರಷ್ಟಾಚಾರವನ್ನು ಸಹಿಸುವ ಪ್ರಶ್ನೆಯೇ ಇಲ್ಲ. ಜನರ ಕೆಲಸ ಸುಲಭವಾಗಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮುಂದಿನ ದಿನಗಳಲ್ಲಿ ಮಾಡಲಾಗುವುದು ಎಂದು ಶಾಸಕರು ಪ್ರತಿಕ್ರಿಯಿಸಿದ್ದು ಈ ವಿಚಾರದಲ್ಲಿ ತಾನು ಜಿಲ್ಲಾದಿಕಾರಿಗಳ ಜೊತೆ ಚರ್ಚಿಸಿದ್ದೇನೆ ಎಂದು ಹೇಳಿದರು.

LEAVE A REPLY

Please enter your comment!
Please enter your name here