ಪುತ್ತೂರು: ಪುತ್ತೂರಿನ ಬ್ಯಾನರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರಕರಣದಲ್ಲಿ ಬಂದಿತರ ಮೇಲಿನ ಪೊಲೀಸರ ವರ್ತನೆ, ಪೊಲೀಸ್ ಇಲಾಖೆಗೆ ಕಪ್ಪು ಚುಕ್ಕೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಟ್ವೀಟ್ ಮಾಡಿದ್ದಾರೆ.

ದೂರಿನ ಬಗ್ಗೆ ಪರಿಶೀಲಿಸಿ ತನಿಖೆ ನಡೆಸುವ ಬದಲು ಚಿತ್ರ ಹಿಂಸೆ ನೀಡಿರುವುದನ್ನು ಖಂಡಿಸುವುದಾಗಿ ಬರೆದಿರುವ ಅವರು ಉನ್ನತ ಅಧಿಕಾರಿಗಳು ತಪ್ಪಿತಸ್ಥ ಅಧಿಕಾರಿಗಳ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಟ್ವೀಟ್ ಗಾಗಿ ಇಲ್ಲಿ ಕ್ಲಿಕ್ ಮಾಡಿ