ಪೊಲೀಸ್ ದೌರ್ಜನ್ಯದ ವಿರುದ್ದ ಮಾನವ ಹಕ್ಕು ಆಯೋಗಕ್ಕೆ ದೂರು- ಅರುಣ್ ಕುಮಾರ್ ಪುತ್ತಿಲ

0

ಪುತ್ತೂರು: ಹಿಂದೂ ಯುವಕರ ಮೇಲೆ ನಡೆದಿರುವ ಪೊಲೀಸ್ ದೌರ್ಜನ್ಯದ ವಿರುದ್ಧ ಮಾನವ ಹಕ್ಕು ಆಯೋಗಕ್ಕೆ ದೂರು ನೀಡಲಾಗುವುದು ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ. ಹರೀಶ್ ಪೂಂಜ ಅವರೊಂದಿಗೆ ಆಸ್ಪತ್ರೆಗೆ ಭೇಟಿ ಮಾಡಿ ಗಾಯಾಳುಗಳ ಯೋಗಕ್ಷೇಮ ವಿಚಾರಿಸಿದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅರುಣ್‌ ಕುಮಾರ್‌ ಪುತ್ತಿಲ ಪ್ರಚೋದನೆಗೆ ಒಳಗಾಗಿ ಪೊಲೀಸರು ಹಿಂದೂ ಕಾರ್ಯಕರ್ತರ ಮೇಲೆ ದೌರ್ಜನ್ಯ ಎಸಗಿದ್ದಾರೆ.ಈ ಪ್ರಶ್ನಾತೀತ ಕೃತ್ಯಕ್ಕೆ ಕಾರಣರಾದವರನ್ನು ಅಮಾನತು ಗೊಳಿಸುವಂತೆ ಆಗ್ರಹಿಸಿದ್ದಾರೆ. ರಾಜ್ಯದಲ್ಲಿ ಸರಕಾರ ಬದಲಾದೊಡನೆ ವಿಟ್ಲ,ಪುತ್ತೂರು, ಕಾವು, ಸವಣೂರು ಸೇರಿದಂತೆ ಹಲವೆಡೆ ಅಹಿತಕರ ಘಟನೆ ನಡೆದಿದೆ ಹಿಂದೂ ಸಮಾಜದ ಜೊತೆ ನಾನಿದ್ದೇನೆ ಎಂದು ಹೇಳಿದ್ದಾರೆ.

ಘಟನೆ ಕುರಿತಾಗಿ ಅರುಣ್‌ ಕುಮಾರ್‌ ಪುತ್ತಿ ಏನಂದರು- ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

LEAVE A REPLY

Please enter your comment!
Please enter your name here