ಪೊಲೀಸರು ಕಾನೂನು ಮೀರಿ ವರ್ತಿಸಿದ್ದಲ್ಲಿ ಕ್ರಮ- ಶಾಸಕ ಅಶೋಕ್‌ ಕುಮಾರ್‌ ರೈ

0

ಪುತ್ತೂರು : ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತಿಸಿದ್ದಲ್ಲಿ ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಅಶೋಕ್ ಕುಮಾರ್ ತಿಳಿಸಿದ್ದಾರೆ ಬಿಜೆಪಿ ರಾಜ್ಯಧ್ಯಕ್ಷ ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪೊಲೀಸ್ ದೌರ್ಜನ್ಯದ ಬಗೆಗಿನ ಫೋಟೋ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಗಮನಕ್ಕೆ ಬಂದಿದೆ. ಘಟನೆಯ ಸತ್ಯಾಂಶದ ಬಗ್ಗೆ ಸಂಬಂಧಪಟ್ಟವರ ಜೊತೆ ಮಾಹಿತಿ ಪಡೆದುಕೊಳ್ಳುವೆ ಪ್ರಕರಣದಲ್ಲಿ ಪೊಲೀಸರು ಕಾನೂನು ಮೀರಿ ವರ್ತನೆ ತೋರಿದ್ದು ಕಂಡು ಬಂದಲ್ಲಿ ಅಂಥವರ ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಿಸಿದವರಿಗೆ ಸೂಚನೆ ನೀಡುತ್ತೇನೆ ಎಂದು ಅಶೋಕ್ ಕುಮಾರ್ ರೈ ಸುದ್ದಿಗೆ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here