ಬ್ರಿಲಿಯಂಟ್ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿ ವೇತನ

0

ಮಂಗಳೂರು: ನಗರದ ಪಿ.ವಿ.ಎಸ್. ವೃತ್ತದ ಬಳಿ ಇರುವ ಬ್ರಿಲಿಯಂಟ್ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ತರಗತಿಯ ವಾರ್ಷಿಕ ಪರೀಕ್ಷೆಯ ಅಂಕದ ಆಧಾರದಲ್ಲಿ (ರೂ.6,000/- ರಿಂದ ರೂ. 36,000/- ವರಗೆ) ವಿದ್ಯಾರ್ಥಿವೇತನ ನೀಡಲಾಗುವುದು ಕಾಲೇಜು ಶುಲ್ಕವನ್ನು ನಾಲ್ಕು ಕಂತುಗಳಲ್ಲಿ ಪಾವತಿಸಬಹುದು. ಇದಲ್ಲದೆ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಿಶೇಷವಾದ ವಿದ್ಯಾರ್ಥಿವೇತನ ನೀಡಲಾಗುವುದು. ಬ್ರಿಲಿಯಂಟ್ ಪಿಯು ಕಾಲೇಜಿನಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪ್ರಥಮ ಮತ್ತು ದ್ವಿತೀಯ ಪಿಯುಸಿಗೆ ವಿಜ್ಞಾನ ವಿಭಾಗದಲ್ಲಿ PCMB/PCMS ವಾಣಿಜ್ಯ ವಿಭಾಗದಲ್ಲಿ EBAS ಕೋರ್ಸುಗಳು ಲಭ್ಯವಿದೆ. ಇದರೊಂದಿಗೆ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ CET/NEET/JEE-MAIN/NATA ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ಕೊಡಲಾಗುವುದು ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ CA/CS Foundation/CLAT ಮುಂತಾದ ಪರೀಕ್ಷೆಗಳಿಗೆ ಕೂಡ ತರಬೇತಿ ಲಭ್ಯವಿದೆ. ಹುಡುಗ ಹುಡುಗಿಯರಿಗೆ ಪ್ರತ್ಯೇಕ ಹಾಸ್ಟೆಲ್ ಸೌಲಭ್ಯವಿದೆ. ವಿದ್ಯಾರ್ಥಿವೇತನ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿರಿ 9945238106/0824-2983995/2495995 ಸಂಪರ್ಕಿಸುವಂತೆ ಸಂಸ್ಥೆಯ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here