ಮಜಲುಮಾರು- ಉಮಾಮಹೇಶ್ವರ ದೇವಸ್ಥಾನದಲ್ಲಿ ದೃಢಕಲಶ

0

ಪುತ್ತೂರು: ನರಿಮೊಗರು ಗ್ರಾಮದ ಮುಕ್ವೆ ಮಜಲುಮಾರು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ ನಡೆದು ದೃಢಕಲಶಾಭಿಷೇಕವು ಮೇ.18ರಂದು ನಡೆಯಿತು.


ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೆಳಿಗ್ಗೆ ಗಣಹೋಮ, ದೃಢಕಲಶಪೂಜೆ, ಪಂಚಾಮೃತ ಅಭಿಷೇಕ, ಸೀಯಾಳಾಭಿಷೇಕ ದೃಢಕಲಶಾಭಿಷೇಕ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ ನಡೆಯಿತು. ಮಜಲುಮಾರು ಶ್ರೀ ಉಮಾಮಹೇಶ್ವರ ಸೇವಾ ಟ್ರಸ್ಟ್ ನ ಅಧ್ಯಕ್ಷ ಲಕ್ಷ್ಮೀಶ ತಂತ್ರಿ, ಉಪಾಧ್ಯಕ್ಷ ಬೆಳಿಯಪ್ಪ ಗೌಡ ಕೆದ್ಕಾರ್, ಕಾರ್ಯದರ್ಶಿ ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ ಪದ್ಮನಾಭ ಪೂಜಾರಿ ಬೆದ್ರಾಳ,‌ ಸುಧೀರ್ ಹೆಬ್ಬಾರ್ ಮಣಿಯ, ರವಿ ಮಣಿಯ, ಪ್ರಸನ್ನ ಭಟ್ ಪಂಚವಟಿ, ಬ್ರಹ್ಮಕಲಶೋತ್ಸವ ಸಮಿತಿ ಉಪಾಧ್ಯಕ್ಷ ಚಂದ್ರಕಲಾ ಮುಕ್ವೆ ಸೇರಿದಂತೆ ಹಲವು ಮಂದಿ ಭಕ್ತಾದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here