ಪುತ್ತೂರು:ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಆಗಮನ

0

ಪುತ್ತೂರು: ಬ್ಯಾನರ್‌ ಪ್ರಕರಣದಲ್ಲಿ ಪೊಲೀಸರಿಂದ ದೌರ್ಜನ್ಯಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಗಾಯಾಳುಗಳ ಯೋಗಕ್ಷೇಮವನ್ನು ವಿಚಾರಿಸಲು ಬಿಜೆಪಿ ಶಾಸಕ, ಮಾಜಿ ಕೇಂದ್ರ ಸಚಿವ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿನ ಸಂಘ ಕಾರ್ಯಾಲಯ ಪಂಚವಟಿಗೆ ಆಗಮಿಸಿದ್ದಾರೆ.

ಅಲ್ಲಿಂದ ಬಿಜೆಪಿ ಕಚೇರಿಗೆ ಆಗಮಿಸಿದ ಯತ್ನಾಳ್‌ ಪಕ್ಷದ ಪ್ರಮುಖರು ಬರಮಾಡಿಕೊಂಡರು.ಈ ಸಂದರ್ಭದಲ್ಲಿ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪಗೌಡ,ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಸಹಿತ ಪಕ್ಷದ ಹಲವಾರು ಮಂದಿ ನಾಯಕರು ಉಪಸ್ಥಿತರಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ಯತ್ನಾಳ್‌ ಅವರನ್ನು ಪಕ್ಷದ ಹಿರಿಯರು ಸ್ವಾಗತಿಸಿದರು.

ಅಲ್ಲಿಂದ ಪೊಲೀಸರಿಂದ ದೌರ್ಜನ್ಯಕ್ಕೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾದ ಗಾಯಾಳುಗಳ ಆರೋಗ್ಯ ವಿಚಾರಿಸಲಿದ್ದಾರೆ.

LEAVE A REPLY

Please enter your comment!
Please enter your name here