ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಭೇಟಿ

0

ಪುತ್ತೂರು: ವಿಜಯಪುರದ ಬಿಜೆಪಿ ಶಾಸಕ, ಫೈರ್‌ಬ್ರ್ಯಾಂಡ್ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್‌ ಪುತ್ತೂರಿಗೆ ಆಗಮಿಸಿದ್ದಾರೆ.ಮಂಗಳೂರು ವಿಮಾನ ನಿಲ್ದಾಣದಿಂದ ನೇರವಾಗಿ ಪುತ್ತೂರಿಗೆ ಆಗಮಿಸಿದ ಯತ್ನಾಳ್‌ ಪಂಚವಟಿಗೆ ತೆರಳಿ ಅಲ್ಲಿಂದ ಬಿಜೆಪಿ ಕಚೇರಿಗೆ ತೆರಳಿದರು. ಬ್ಯಾನರ್‌ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸ್‌ ದೌರ್ಜನ್ಯಕ್ಕೆ ಒಳಗಾಗಿರುವ ಹಿಂದೂ ಕಾರ್ಯಕರ್ತರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಲೆಂದು ಪುತ್ತೂರಿಗೆ ಆಗಮಿಸಿದ ಯತ್ನಾಳ್‌ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವಳದ ಸತ್ಯಧರ್ಮ ನಡೆಯಲ್ಲಿ‌ ನಿಂತು‌ ಪ್ರಾರ್ಥನೆ ಮಾಡಿದರು.ಈ ಸಂದರ್ಭದಲ್ಲಿ ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯ ರಾಮಚಂದ್ರ ಕಾಮತ್ ಶಲ್ಯ ಹಾಕಿ ಗೌರವಿಸಿದರು. ದೇವಳದ ವ್ಯವಸ್ಥಾಪನ ಸಮಿತಿ ಸದಸ್ಯರಾದ ರಾಮದಾಸ್ ಗೌಡ, ಶೇಖರ್ ನಾರಾವಿ ಸಹಿತ ಹಲವಾರು ಮಂದಿ ಪಕ್ಷದ ನಾಯಕರು ಸಹಿತ ಅನೇಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here