ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಪೆರ್ಲಂಪಾಡಿ ಷಣ್ಮುಖ ದೇವ ಪ್ರೌಢಶಾಲೆಗೆ ಶೇ.97 ಫಲಿತಾಂಶ

0

ಪುತ್ತೂರು: ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆಯಲ್ಲಿ ಕೊಳ್ತಿಗೆ ಗ್ರಾಮದ ಪೆರ್ಲಂಪಾಡಿಯಲ್ಲಿರುವ ಷಣ್ಮುಖದೇವ ಪ್ರೌಢಶಾಲೆಯು ಶೇ.97 ಫಲಿತಾಂಶ ಪಡೆದುಕೊಂಡಿದೆ. ಪರೀಕ್ಷೆಗೆ ಹಾಜರಾದ 29 ವಿದ್ಯಾರ್ಥಿಗಳಲ್ಲಿ ಕು.ಸಾತ್ವಿಕಾರವರು 625 ರಲ್ಲಿ 582 ಅಂಕಗಳೊಂದಿಗೆ ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಉಳಿದ ಇಪ್ಪತ್ತೊಂದು ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ,6 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ ಎಂದು ಶಾಲಾ ಮುಖ್ಯಗುರುಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here