ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಇಂದು ಪ್ರಮಾಣವಚನ

0

ಪುತ್ತೂರು : ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿರುವ ಪ್ರಮಾಣವಚನ ಕಾರ್ಯಕ್ರಮದಲ್ಲಿ ಇವರೊಂದಿಗೆ 8 ಮಂದಿ ಕ್ಯಾಬಿನೆಟ್ ದರ್ಜೆ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಾಹ್ನ 12:30 ಕ್ಕೆ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ . ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಅನುಮತಿ ನೀಡಿದ್ದು ಅವರ ಹೆಸರು ಇಂತಿದೆ. ರಾಮಲಿಂಗ ರೆಡ್ಡಿ, ಎಂ ಬಿ ಪಾಟೀಲ್ ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ,, ಕೆಜೆ ಜಾರ್ಜ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ಜಮೀರ್ ಅಹಮದ್ ಖಾನ್.

LEAVE A REPLY

Please enter your comment!
Please enter your name here