ಎಸ್‌ಸಿಡಿಸಿಸಿ ಬ್ಯಾಂಕಿಗೆ ಅಟಲ್ ಪಿಂಚಣಿ ಯೋಜನೆಯ ‘ಎಕ್ಸಂಪಲರಿ ಎವಾರ್ಡ್ ಆಫ್ ಎಕ್ಸೆಲೆನ್ಸ್’ ಪ್ರಶಸ್ತಿ

0

ಮಂಗಳೂರು:‌ ಭಾರತ ಸರ್ಕಾರದ ಬಹು ಮಹತ್ವಾಕಾಂಕ್ಷೆಯ ಅಟಲ್ ಪಿಂಚಣಿ ಯೋಜನೆಯನ್ನು ಸಮರ್ಪಕವಾಗಿ ಜಾರಿ ತರುವಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಹಕಾರಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿದೆ. ಇದೀಗ ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ನವದೆಹಲಿ ಇವರು ನೀಡಿದ ಅಟಲ್ ಪಿಂಚಣಿ ಯೋಜನೆಯ ’ಎಕ್ಸಂಪಲರಿ ಎವಾರ್ಡ್ ಆಫ್ ಎಕ್ಸೆಲೆನ್ಸ್’ (Exemplary Award Of Excellence) ಪ್ರಶಸ್ತಿಯು ಎಸ್‌ಸಿಡಿಸಿಸಿ ಬ್ಯಾಂಕ್ ಗೆ ಲಭಿಸಿದೆ. ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರದ ಕೋರಿಕೆಯಂತೆ ಎಸ್‌ಸಿಡಿಸಿಸಿ ಬ್ಯಾಂಕ್ 2019ರ ಜನವರಿ -11ರಂದು ಅಟಲ್ ಪಿಂಚಣಿ ಯೋಜನೆ ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದು ಅದರಂತೆ ಬ್ಯಾಂಕಿನ ಪ್ರತಿ ಶಾಖೆಯಲ್ಲೂ ಅಟಲ್ ಪಿಂಚಣಿ ಯೋಜನೆಗೆ ಚಂದಾದಾರರನ್ನು ನೊಂದಾಯಿಸುವ ಗುರಿಯನ್ನು ಪ್ರತಿ ವರ್ಷ ನೀಡಲಾಗುತ್ತದೆ.

ಗಣನೀಯ ಪ್ರಗತಿ : ಕಳೆದ 2019-20, 2020-21 ಹಾಗೂ 2021-22ನೇ ಆರ್ಥಿಕ ವರ್ಷದಲ್ಲಿ ಅಟಲ್ ಪಿಂಚಣಿ ಯೋಜನೆಗೆ ಚಂದಾದಾರರನ್ನು ನೋಂದಾಯಿಸುವಲ್ಲಿ ಎಸ್‌ಸಿಡಿಸಿಸಿ ಬ್ಯಾಂಕ್ ಗಣನೀಯ ಪ್ರಗತಿಯನ್ನು ಸಾಧಿಸಿದೆ ಎಂದು ಬ್ಯಾಂಕಿನ ಅಧ್ಯಕ್ಷರಾದ ಡಾ|ಎಂ.ಎನ್.ರಾಜೇಂದ್ರ ಕುಮಾರ್ ತಿಳಿಸಿದ್ದಾರೆ. ಚಂದಾದಾರರ ನೋಂದಣಿಯೊಂದಿಗೆ ದಾಖಲೆ ನಿರ್ಮಿಸಿದ ಬ್ಯಾಂಕ್ ಈ ಕಾರ್ಯಸಾಧನೆಯಲ್ಲಿ ರಾಜ್ಯದ ಮೊದಲ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಎನ್ನುವ ಖ್ಯಾತಿಗೆ ಪಾತ್ರವಾಗಿತ್ತು. ಇದೀಗ ಭಾರತ ಸರ್ಕಾರದ ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ 2022ರ ಡಿಸೆಂಬರ್ ಅಂತ್ಯದ ವರೆಗೆ ನೀಡಿದ ಗುರಿಯನ್ನು ಮೀರಿ ಎಸ್ ಸಿಡಿಸಿಸಿ ಬ್ಯಾಂಕ್ ಶೇ.151.71 ಸಾಧನೆಗೈದಿದೆ .

LEAVE A REPLY

Please enter your comment!
Please enter your name here