ಪುತ್ತೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಿದರು
ಬಳಿಕ ಸಂಪುಟ ಸಚಿವರಾಗಿ ಡಾ. ಜಿ ಪರಮೇಶ್ವರ್, ಕೆಎಚ್ ಮುನಿಯಪ್ಪ, ಕೆಜೆ ಜಾರ್ಜ್, ಎಮ್ ಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ ,ರಾಮಲಿಂಗ ರೆಡ್ಡಿ, ಜಮೀರ್ ಅಹ್ಮದ್ ಖಾನ್ ಪ್ರಮಾಣ ವಚನ ಸ್ವೀಕರಿಸಿದರು.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಪವರ್ ಚಂದ್ ಗೆಹ್ಲೋಟ್ ಪ್ರಮಾಣ ವಚನ ಬೋಧಿಸಿದರು.
ಸಮಾರಂಭದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ,ಪ್ರಿಯಾಂಕ ಗಾಂಧಿ ,ರಣದೀಪ್ ಸುರ್ಜೆವಾಲಾ, ಕೆಸಿ ವೇಣುಗೋಪಾಲ್, ಬಿಹಾರ್ ಮುಖ್ಯಮಂತ್ರಿ ನಿತೀಶ್ ಕುಮಾರ್ ,ನಟ ಕಮಲ್ ಹಾಸನ್, ನಟಿ ರಮ್ಯಾ, ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.