ನೂತನ ಸರಕಾರದ ಮೊದಲ ಸಂಪುಟ ಸಭೆ

0

ಪುತ್ತೂರು: ನೂತನ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಮತ್ತು 8 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೆ ವಿಧಾನ ಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಮೊದಲ ಸಂಪುಟ ಸಭೆ ನಡೆಯಿತು. ಸಿ ಎಂ , ಡಿಸಿಎಂ ಸೇರಿದಂತೆ 8 ಮಂದಿ ಸಚಿವರು ಸಭೆಯಲ್ಲಿ ಭಾಗವಹಿಸಿದ್ದು, ಚುನಾವಣೆ ವೇಳೆ ನೀಡಿದ್ದ 5 ಗ್ಯಾರೆಂಟಿ ಕಾರ್ಯಕ್ರಮಗಳನ್ನು ಜಾರಿ ತರಲು ಸಂಪುಟ ಸಭೆ ತೀರ್ಮಾನ ಕೈಗೊಳ್ಳಲಿದೆ. ಮಾತ್ರವಲ್ಲದೆ ಹಂಗಾಮಿ ಸ್ಪೀಕರ್‌ ನ್ನು ಸಭೆ ಶಿಫಾರಸ್ಸು ಮಾಡಲಿದೆ. ಸಂಪುಟ ಸಭೆಯ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

LEAVE A REPLY

Please enter your comment!
Please enter your name here