ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಪ್ರಮಾಣ ವಚನ- ಶಾಸಕ ಅಶೋಕ್ ಕುಮಾರ್ ರೈ ಸಹಿತ ಪುತ್ತೂರು, ವಿಟ್ಲ-ಉಪ್ಪಿನಂಗಡಿ ಪದಾಧಿಕಾರಿಗಳು ಭಾಗಿ

0

ಪುತ್ತೂರು: ಬೆಂಗಳೂರು ಕಂಠೀರವ ಸ್ಟೇಡಿಯಂನಲ್ಲಿ ಮೇ.20 ರಂದು ನಡೆದ ರಾಜ್ಯದ 24ನೇ ಮುಖ್ಯಂತ್ರಿಯಾಗಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಸಹಿತ ಪುತ್ತೂರು ಬ್ಲಾಕ್ ಹಾಗೂ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಭಾಗವಹಿಸಿದ್ದರು.


ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾವ್ ಕೆ.ಬಿ., ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ರೋಷಣ್ ರೈ ಬನ್ನೂರು, ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ ಕೃಷ್ಣ ಪ್ರಸಾದ್ ಆಳ್ವ, ಇಂಟಕ್ ಅಧ್ಯಕ್ಷ ಜಯಪ್ರಕಾಶ್ ಬದಿನಾರು, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಸಂಯೋಜಕ ಸಂತೋಷ್ ಭಂಡಾರಿ ಚಿಲ್ಮೆತ್ತಾರು, ಅಬ್ದುಲ್ ರಹಿಮಾನ್ ಯೂನಿಕ್, ರಫೀಕ್, ಆದಿಲ್ ಸಹಿತ ಹಲವು ಮಂದಿ ಪದಾಧಿಕಾರಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here