ಪುತ್ತೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರ ವಹಿಸಿಕೊಂಡ ಹಿನ್ನೆಲೆಯಲ್ಲಿ ಮೇ 20 ರಂದು ಕುದ್ಮಾರು ಜಂಕ್ಷನ್ ನಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಸಂಭ್ರಮಾಚರಣೆ ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಅಕ್ರಮ ಸಕ್ರಮ ಸಮಿತಿಯ ಮಾಜಿ ಸದಸ್ಯ ಕೆಡೆಂಜಿಗುತ್ತು ಪ್ರವೀಣ್ ಕುಮಾರ್ ಸಹಿತ ಅನೇಕ ಮಂದಿ ಉಪಸ್ಥಿತರಿದ್ದರು.