ಎಎಸ್‌ಐ ಸಂತೋಷ್ ಪಡೀಲ್ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆ

0

ಪುತ್ತೂರು: ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಪತ್ತೆ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸಿಕೊಂಡಿದ್ದು ಪ್ರಸ್ತುತ ಮಂಗಳೂರು ನಗರ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಸಹಾಯಕ ಆರಕ್ಷಕ ಉಪನಿರೀಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಸಂತೋಷ್ ಪಡೀಲ್ ಅವರು ಮುಖ್ಯಮಂತ್ರಿ ‘ಚಿನ್ನದ ಪದಕ’ ಪುರಸ್ಕಾರಕ್ಕೆ ಆಯ್ಕೆಯಾಗಿದ್ದಾರೆ.

ಕರ್ತವ್ಯದ ಅವಧಿಯಲ್ಲಿ ಹಲವಾರು ಅಪರಾಧ ಪ್ರಕರಣಗಳ ಪತ್ತೆ ಮಾಡಿರುವುದು ಮತ್ತು ವೃತ್ತಿಯಲ್ಲಿನ ಪ್ರಾಮಾಣಿಕ ಸೇವೆಯನ್ನು ಪರಿಗಣಿಸಿ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಚಿನ್ನದ ಪದಕ ಪುರಸ್ಕಾರ ನೀಡಿ ಅಭಿನಂದಿಸಲಿದ್ದಾರೆ. ಈ ಹಿಂದೆ ಪುತ್ತೂರು ನಗರ ಠಾಣೆಯಲ್ಲಿ ಅಪರಾಧ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದ ಇವರು ಬಳಿಕ ಬರ್ಕೆ ಠಾಣೆ, ಜಿಲ್ಲಾ ಅಪರಾಧ ಪತ್ತೆದಳ, ಪಾಂಡೇಶ್ವರ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸಿದ್ದು ಪ್ರಸ್ತುತ ಮಂಗಳೂರು ನಗರ ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಎಎಸ್‌ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

LEAVE A REPLY

Please enter your comment!
Please enter your name here