ಪುತ್ತೂರು: ದಕ್ಷಿಣ ಕನ್ನಡ ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ಮೇ.26ರಂದು 11ಗಂಟೆಗೆ ಮಂಗಳೂರಿನ ಎಕ್ಕೂರು ಕೃಷಿ ವಿಜ್ಞಾನ ಕೇಂದ್ರದ ಮೀನುಗಾರಿಕಾ ಮಹಾವಿದ್ಯಾಲಯ ಆವರಣದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ರೈತರಿಗೆ/ರೈತ ಮಹಿಳೆಯರಿಗೆ ಮಡಂಜಿ ಮೀನಿನ ಕೃಷಿ ಮತ್ತು ನಿರ್ವಹಣೆ ತರಬೇತಿ ಕಾರ್ಯಕ್ರಮ ನಡೆಯಲಿದೆ. ವಿಜ್ಞಾನಿ ಡಾ. ಚೇತನ್ ಎನ್. ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಲಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9535216340 ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.