ಪೆರಾಬೆ: ಪೆರಾಬೆ ಗ್ರಾ.ಪಂ.ನಲ್ಲಿ ನಡೆದ ಗ್ರಾಮೀಣ ಬೇಸಿಗೆ ಶಿಬಿರವನ್ನು ಗ್ರಾ.ಪಂ.ಅಧ್ಯಕ್ಷ ಮೋಹನ್‌ದಾಸ್ ರೈ ಪರಾರಿ ಅವರು ಮೇ.19ರಂದು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಮೋಹನ್‌ದಾಸ್ ರೈಯವರು, ಗ್ರಾಮ ಪಂಚಾಯತ್‌ನ ಗ್ರಂಥಾಲಯದಲ್ಲಿ ಗ್ರಾಮೀಣಾಭಿವೃದ್ಧಿ ಯೋಜನೆಯ ಮೂಲಕ ಮಕ್ಕಳು ಗ್ರಂಥಾಲಯದ ಸದುಪಯೋಗ ಪಡೆದುಕೊಂಡು ಜ್ಞಾನವಂತರಾಗಿ ಮುಂದಿನ ದಿನಗಳಲ್ಲಿ ಉತ್ತಮ ಸಮಾಜ ನಿರ್ಮಾಣ ಮಾಡುವಲ್ಲಿ ಯಶಸ್ವಿಯಾಗಲಿ ಎಂದರು.
ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಶಾಲಿನಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ಮಕ್ಕಳಲ್ಲಿ ಓದುವ ಹವ್ಯಾಸವನ್ನು ಹೆಚ್ಚಿಸುವ ಗ್ರಾಮೀಣ ಬೇಸಿಗೆ ಶಿಬಿರದ ಸದುಪಯೋಗವನ್ನು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಪಡೆದುಕೊಳ್ಳುವಂತೆ ಹೇಳಿದರು. ಪೆರಾಬೆ ಶಾಲೆಯ ಮುಖ್ಯ ಶಿಕ್ಷಕಿ ಸುಚೇತಾ ಕುಮಾರಿಯವರು ಮಾತನಾಡಿ, ಮಕ್ಕಳು ತಲೆ ತಗ್ಗಿ ಪುಸ್ತಕ ಓದಿದರೆ ಮುಂದೆ ಅವರು ತಲೆ ಎತ್ತುವ ಧೈರ್ಯ ಸಿಗುತ್ತದೆ. ಮಕ್ಕಳು ಜ್ಞಾನ ಪಡೆದುಕೊಳ್ಳಿ ಎಂದರು. ಸಭೆಯಲ್ಲಿ ಪೆರಾಬೆ ಗ್ರಾ.ಪಂ.ಸದಸ್ಯರು, ಮಕ್ಕಳ ಪೋಷಕರು ಉಪಸ್ಥಿತರಿದ್ದರು. ಗ್ರಂಥಾಲಯ ಮೇಲ್ವಿಚಾರಕಿ ಜಯಕುಮಾರಿ ಸ್ವಾಗತಿಸಿ, ವಂದಿಸಿದರು.