ಕ್ಷೇತ್ರದಾದ್ಯಂತ ಸಂಚರಿಸಿ ಜನತೆಯ ಸಮಸ್ಯೆಯನ್ನು ಆಲಿಸುವೆ- ಅಶೋಕ್ ಕುಮಾರ್ ರೈ

0

ಪುತ್ತೂರು:ಪುತ್ತೂರು ಶಾಸಕರಾಗಿ ಅಶೋಕ್‌ಕುಮಾರ್ ರೈಯವರು ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಕ್ಷೇತ್ರದ ಜನತೆಗೆ ಅಭಿನಂದನೆ ಹಾಗೂ ಕೃತಜ್ಞತೆ ಸಲ್ಲಿಸಿದರು. ನನ್ನ ಮೇಲೆ ಅಪಾರ ವಿಶ್ವಾಸ, ಅಭಿಮಾನ ಇಟ್ಟು ಈ ಬಾರಿ ಚುನಾವಣೆಯಲ್ಲಿ ಬಹುಮತದಿಂದ ಗೆಲ್ಲಿಸಿದ ಮತದಾರರಿಗೆ ಅಭಿನಂದನೆಯನ್ನು ಸಲ್ಲಿಸಿದರು.
ಅಧಿವೇಶನದ ಬಳಿಕ ಪುತ್ತೂರು ಕ್ಷೇತ್ರದಲ್ಲಿ ಸಾರ್ವಜನಿಕರನ್ನು ಭೇಟಿಯಾಗಿ ಜನರ ಸಮಸ್ಯೆಗಳನ್ನು ಆಲಿಸಲಿದ್ದೇನೆ. ಚುನಾವಣಾ ಪೂರ್ವದಲ್ಲಿ ಸರಕಾರ 5 ಗ್ಯಾರಂಟಿಗಳನ್ನು ನೀಡಿದ್ದು ಅವುಗಳು ಸಚಿವ ಸಂಪುಟ ಸಭೆಯಲ್ಲಿ ಒಂದೊಂದಾಗಿ ಜಾರಿಯಾಗಲಿದೆ. ಕಾಂಗ್ರೆಸ್ ಜನತೆಗೆ ಕೊಟ್ಟ ಎಲ್ಲಾ ಭರವಸೆಗಳನ್ನು ಈಡೇರಿಸಲಿದೆ ಇದರಲ್ಲಿ ಯಾರಿಗೂ ಅನುಮಾನ ಬೇಡ ಈ ಹಿಂದೆಯೂ ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಇದ್ದಾಗ ಅವರು ಕೊಟ್ಟ ಭರವಸೆಗಳ ಪೈಕಿ ಶೇ. 89 ಭರವಸೆಗಳನ್ನು ಈಡೇರಿಸಿದ್ದರು. ಮೊದಲ ಸಚಿವ ಸಂಪುಟದ ಸಭೆಯಲ್ಲಿ ಅನ್ನ ಭಾಗ್ಯದ ಅಕ್ಕಿ ಯೋಜನೆಗೆ ಅಸ್ತು ನೀಡಲಾಗಿದೆ. ಉಳಿದಂತೆ ಗೃಹಜ್ಯೋತಿ, ಗೃಹಲಕ್ಷಿ, ಪದವಿ, ಡಿಪ್ಲೊಮಾ ನಿರುದ್ಯೋಗಿಗಳಿಗೆ ಭತ್ಯೆ ಹಾಗೂ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ ಎಲ್ಲಾ ಭರವಸೆಗಳೂ ಈಡೇರಲಿದೆ ಎಂದು ಶಾಸಕರು ತಿಳಿಸಿದರು.

ಬೂತ್ ಬೂತ್‌ಗಳಿಗೆ ಭೇಟಿ :
ಕ್ಷೇತ್ರದ ಜನತೆಯ ಸಮಸ್ಯೆಗಳನ್ನು ಆಲಿಸುವ ಉದ್ದೇಶದಿಂದ ಬೂತ್ ಬೂತ್‌ಗಳಲ್ಲಿ ಸಂದರ್ಶನ ಮಾಡಿ ಆ ಭಾಗದ ಜನರ ಸಮಸ್ಯೆಗಳನ್ನು ಆಲಿಸುವ ಉದ್ದೇಶವನ್ನಿಟ್ಟುಕೊಂಡಿದ್ದೇನೆ. ಅಧಿವೇಶನ ಮುಗಿದ ಬಳಿಕ ಕ್ಷೇತ್ರದಾದ್ಯಂತ ಪರ್ಯಟನೆ ಆರಂಭವಾಗಲಿದೆ. 94 ಸಿ, ಅಕ್ರಮಸಕ್ರಮ ಸೇರಿದಂತೆ ಅನೇಕ ಕಡತಗಳು ಇನ್ನೂ ಜನರ ಕೈಗೆ ಸಿಗದೇ ಇದ್ದು ಈ ಬಗ್ಗೆ ಕ್ರಮಕೈಗೊಳ್ಳಲಿದ್ದೇನೆ. ನಾನೀಗ ಕ್ಷೇತ್ರದ ಎಲ್ಲಾ ಜನರ ಶಾಸಕನಾಗಿದ್ದು ಜಾತಿ, ಮತ ಪಕ್ಷ ಬೇಧವಿಲ್ಲದೆ ಎಲ್ಲರ ಸಮಸ್ಯೆಗಳಿಗೂ ಕಿವಿಯಾಗಲಿದ್ದೇನೆ. ಕ್ಷೇತ್ರದ ಅಭಿವೃದ್ದಿಗೆ ಜನತೆಯ ಸಹಕಾರವನ್ನು ಕೋರಿದ ಅವರು ಮುಂದಿನ ಐದು ವರ್ಷಗಳಲ್ಲಿ ಹೆಚ್ಚಿನ ಅನುದಾನವನ್ನು ತರುವ ಮೂಲಕ ಕ್ಷೇತ್ರವನ್ನು ಅಭಿವೃದ್ದಿ ಮಾಡುವ ಕನಸು ಇಟ್ಟುಕೊಂಡಿದ್ದು ಇನ್ನೂ ಹಲವು ಪ್ರಮುಖ ಯೋಜನೆಗಳು, ಯೋಚನೆಗಳು ನಮ್ಮ ಮುಂದಿದೆ. ಸಾರ್ವಜನಿಕರ ಬೇಡಿಕೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡಲಿದ್ದೇನೆ. ಜನರ ಸಹಕಾರ ಮತ್ತು ಆಶೀರ್ವಾದವನ್ನು ಬೇಡುತ್ತಿದ್ದೇನೆ ಎಂದು ಅಶೋಕ್ ಕುಮಾರ್ ರೈ ಹೇಳಿದರು.

LEAVE A REPLY

Please enter your comment!
Please enter your name here