ಹಿಂದಿನ ಬಿಜೆಪಿ ಸರಕಾರ ಕೈಗೊಂಡ ಎಲ್ಲಾ ಕಾಮಗಾರಿಗಳಿಗೆ ಹಣ ಪಾವತಿಗೆ ತಡೆ: ರಾಜ್ಯ ಸರಕಾರ ಸುತ್ತೋಲೆ

0

ಬೆಂಗಳೂರು: ಹಿಂದಿನ ಬಿಜೆಪಿ ಸರಕಾರ ಕೈಗೊಂಡ ಎಲ್ಲಾ ಇಲಾಖೆಗಳ ಹಾಗೂ ಇಲಾಖೆಗಳ ಅಧೀನಕ್ಕೊಳಪಡುವ ನಿಗಮ, ಮಂಡಳಿ, ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಮುಂದಿನ ಹಣ ಬಿಡುಗಡೆ, ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯನವರ ನಿರ್ದೇಶನದ ಹಿನ್ನೆಲೆಯಲ್ಲಿ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ತಡೆ ಹಿಡಿಯುವಂತೆ ಸರಕಾರದ ಎಲ್ಲಾ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರ್ಥಿಕ ಇಲಾಖೆಯ ಸರಕಾರದ ಕಾರ್ಯದರ್ಶಿ ಡಾ.ಏಕರೂಪ್ ಕೌರ್ ಸುತ್ತೋಲೆ ಹೊರಡಿಸಿದ್ದಾರೆ.

LEAVE A REPLY

Please enter your comment!
Please enter your name here