‘ಬೇರ’ ಸಿನಿಮಾದ ಟ್ರೈಲರ್ ಬಿಡುಗಡೆಗೊಳಿಸಿದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

0

ಬೆಳ್ತಂಗಡಿ: ಎಸ್.ಎಲ್.ವಿ. ಕಲರ್ಸ್ ಲಾಂಛನದಲ್ಲಿ ಮೂಡಿಬಂದ ಬೆಳ್ತಂಗಡಿಯ ವಿನು ಬಳಂಜ ನಿರ್ದೇಶನದ ‘ಬೇರ’ ಸಿನಿಮಾದ ಟ್ರೈಲರ್ ನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಚಿತ್ರಕ್ಕೆ ಹಾಗೂ ಚಿತ್ರ ತಂಡಕ್ಕೆ ಶುಭ ಆಶೀರ್ವಾದ ನೀಡಿದರು.


ಈ ಸಂದರ್ಭದಲ್ಲಿ ರಾಜರಾಮ ಶೆಟ್ಟಿ ಕೋಲ್ಪೆಗುತ್ತು, ಸಿನಿಮಾ ನಿರ್ಮಾಪಕ ದಿವಾಕರ ದಾಸ ನೇರ್ಲಾಜೆ, ನಿರ್ದೇಶಕ ವಿನು ಬಳಂಜ, ಕಾರ್ಯಕಾರಿ ನಿರ್ಮಾಪಕ ರಾಮದಾಸ್ ಶೆಟ್ಟಿ ವಿಟ್ಲ, ಬಹುಭಾಷ ನಟಿ ಹರ್ಷಿಕಾ ಪೂಣಚ್ಚ, ಸ್ವರಾಜ್ ಶೆಟ್ಟಿ, ಯಶ್ ಶೆಟ್ಟಿ ಉಪಸ್ಥಿತರಿದ್ದರು.


ಇತ್ತೀಚಿಗೆ ಟೀಸರ್ ಅನ್ನು ಖ್ಯಾತ ನಟ ಡಾ. ಶಿವರಾಜ್‌ ಕುಮಾರ್ ಬಿಡುಗಡೆಗೊಳಿಸಿದ್ದರು. ಆನಂದ್‌ ಆಡಿಯೋ ಯೂಟ್ಯೂಬ್ ಚಾನೆಲ್‌ನಲ್ಲಿ ಟೀಸರ್ ಅಪ್ಲೋಡ್ ಆಗಿದ್ದು ಈ ವರೆಗೆ ಒಂದು ಮಿಲಿಯನ್‌ಗಿಂತಲೂ ಹೆಚ್ಚು ಸಿನಿಪ್ರಿಯರು ವೀಕ್ಷಿಸಿದ್ದಾರೆ.

ನಾಳೆ ಆನಂದ್ ಆಡಿಯೋದಲ್ಲಿ ಟ್ರೈಲರ್ ಅಧಿಕೃತವಾಗಿ ಬಿಡುಗಡೆಯಾಗಲಿದೆ.

LEAVE A REPLY

Please enter your comment!
Please enter your name here