ಪುತ್ತೂರು: ರಾಜ್ಯ ವಿಧಾನಸಭೆಯ ಸಭಾಪತಿ ಸ್ಥಾನಕ್ಕೆ ಮಂಗಳೂರು ಶಾಸಕ ಯು.ಟಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ. ಸಭಾಪತಿ ಸ್ಥಾನಕ್ಕೆ ನಾಳೆ ಚುನಾವಣೆ ನಡೆಯಲಿದ್ದು, ಯು.ಟಿ ಖಾದರ್ ಅವರನ್ನು ಸಭಾಪತಿಯಾಗಿ ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ. ನಾಮಪತ್ರ ಸಲ್ಲಿಕೆಯ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಝಮೀರ್ ಅಹ್ಮದ್, ಅಜಯ್ ಸಿಂಗ್ ಉಪಸ್ಥಿತರಿದ್ದರು.