ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘದ ಸ್ವರ್ಣ ಮಹೋತ್ಸವ-‘ಸ್ವರ್ಣ ಸಾಧನಾ ಪ್ರಶಸ್ತಿ’ಗೆ ಆಳ್ವಾಸ್ ಪ್ರತಿಷ್ಠಾನದ ಡಾ.ಎಂ.ಮೋಹನ ಆಳ್ವ ಆಯ್ಕೆ

0

ಪುತ್ತೂರು: ಕರ್ನಾಟಕ ರಾಜ್ಯ ನಿವೃತ್ತ ನೌಕರರ ಸಂಘ ಪುತ್ತೂರು ಇದರ ಸ್ವರ್ಣ ಮಹೋತ್ಸವ ಸವಿನೆನಪಿಗಾಗಿ ಸ್ಥಾಪಿಸಲಾದ ‘ಸ್ವರ್ಣ ಸಾಧನಾ ಪ್ರಶಸ್ತಿ’ಗೆ ಮೂಡಬಿದ್ರೆ ಆಳ್ವಾಸ್ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ಆಯ್ಕೆಯಾಗಿದ್ದಾರೆ.


ಪ್ರಶಸ್ತಿಯು ರೂ 15ಸಾವಿರ ನಗದು, ಫಲಕ, ಸ್ಮರಣಿಕೆ, ಶಾಲು, ಫಲಪುಷ್ಪಗಳನ್ನು ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜೂ. 17ರಂದು ಬಪ್ಪಳಿಗೆ ಬೈಪಾ ಸ್ ರಸ್ತೆಯ ಜೈನ ಭವನದಲ್ಲಿ ನಡೆಯಲಿದೆ. ಕಾರ್ಯಕ್ರಮದಲ್ಲಿ ಪಿಯುಸಿಯಲ್ಲಿ ರಾಜ್ಯ ಮಟ್ಟದಲ್ಲಿ 600 ಕ್ಕೆ 600 ಅಂಕಗಳನ್ನು ಪಡೆದು ದಾಖಲೆ ಮಾಡಿದ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ಕು.ಅನನ್ಯ ಕೆ ಎ ಅವರನ್ನು ಮತ್ತು ಎಸ್‌ಎಸ್‌ಎಲ್‌ಸಿಯಲ್ಲಿ 623 ಅಂಕ ಪಡೆದು ರಾಜ್ಯಕ್ಕೆ ತೃತೀಯ ಸ್ಥಾನ ಪಡೆದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕು. ಹಿಮಾನಿ ಎ.ಸಿ, ಸಾಂದೀಪನಿ ವಿದ್ಯಾಸಂಸ್ಥೆಯ ತೇಜಸ್, ಪ್ರಗತಿ ಆಂಗ್ಲ ಮಾದ್ಯಮ ಶಾಲೆಯ ಉತ್ತಮ್ ಜಿ ಅವರನ್ನು ಗೌರವಿಸಲಾಗುವುದು. ಸಮಾರಂಭದ ಬಳಿಕ ಸಂಘದ ವಾರ್ಷಿಕ ಮಹಾಸಭೆಯು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಬಿ.ಐತ್ತಪ್ಪ ನಾಯ್ಕ್ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here