ಪುತ್ತೂರು: ಮೇ.25 ರಂದು ಪುತ್ತೂರು-ಉಪ್ಪಿನಂಗಡಿ ಚತುಷ್ಪಥ ರಸ್ತೆ ಕಾಮಗಾರಿಯನ್ನು ಬೆ.9.30ಕ್ಕೆ ಪುತ್ತೂರು ಶಾಸಕರಾದ ಅಶೋಕ್ ರೈ ವೀಕ್ಷಣೆ ಮಾಡಲಿದ್ದಾರೆ.
ಕಳೆದ ಕೆಲವು ತಿಂಗಳ ಹಿಂದೆ ಆರಂಭಗೊಂಡ ಕಾಮಗಾರಿ ಇನ್ನೂ ಅಪೂರ್ಣ ಸ್ಥಿತಿಯಲ್ಲಿದ್ದು ಕಾಮಗಾರಿಯನ್ನು ಮಳೆಗಾಲಕ್ಕೆ ಮುನ್ನ ಪೂರ್ಣಗೊಳಿಸಬೇಕು ಎಂದು ಕಳೆದ ವಾರ ಶಾಸಕರು ಗುತ್ತಿಗೆದಾರರಿಗೆ ಸೂಚನೆಯನ್ನು ನೀಡಿದ್ದರು. ಕಾಮಗಾರಿ ಕಳಪೆಯಾದಲ್ಲಿ ಕ್ರಮಕೈಗೊಳ್ಳುವ ಎಚ್ಚರಿಕೆಯನ್ನು ನೀಡಿದ್ದರು. ಮಳೆಗಾಲದಲ್ಲಿ ರಸ್ತೆ ಕಾಮಗಾರಿ ನಡೆಸಿದರೆ ಗುಣಮಟ್ಟವನ್ನು ಕಾಯ್ದುಕೊಳ್ಳಲು ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಕಾಮಗಾರಿಯನ್ನು ಮುಗಿಸಬೇಕಾಗಿದ್ದು , ಕಾಮಗಾರಿ ವಿಳಂಬದಿಂದ ವಾಹನ ಸಂಚಾರಕ್ಕೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗಲಿದೆ. ಈ ಹಿನ್ನೆಲೆಯಲ್ಲಿ ಕಾಮಗಾರಿಯನ್ನು ಗುರುವಾರ ತಾನು ವೀಕ್ಷಣೆ ಮಾಡುವುದಾಗಿ ಶಾಸಕರು ತಿಳಿಸಿದ್ದಾರೆ.
ಸಂಜೆ 4 ಗಂಟೆಗೆ ಸಂತ ಫಿಲೋಮಿನಾ ಕಾಲೇಜಿನ ಸಭಾಂಗಣದಲ್ಲಿ ಶಿಕ್ಷಣ ಇಲಾಖೆ ಸಂಭಂದಪಟ್ಟ ಅಧಿಕಾರಿಗಳ ಸಭೆ ನಡೆಯಲಿದೆ ಎಂದು ಪ್ರಕಟನೆಯಲ್ಲಿ ತಿಳಿಸಿದ್ದಾರೆ.