ಕಾಣಿಯೂರು: ಕಾಣಿಯೂರು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯು ಗ್ರಾ.ಪಂ. ಅಧ್ಯಕ್ಷೆ ಲಲಿತಾ ದರ್ಖಾಸು ಅವರ ಅಧ್ಯಕ್ಷತೆಯಲ್ಲಿ ಗ್ರಾ.ಪಂ. ಸಭಾಂಗಣದಲ್ಲಿ ಮೇ 23ರಂದು ನಡೆಯಿತು. ಭಾರತ ಸರಕಾರದ 4ಜಿ ಸ್ಯಾಚುರೇಶನ್ ಪ್ರಾಜೆಕ್ಟ್ ಕಾರ್ಯಕ್ರಮದ ಅಡಿಯಲ್ಲಿ ದೂರ ಸಂಪರ್ಕ ಜಾಲವಿಲ್ಲದ ಗ್ರಾಮಗಳಿಗೆ ದೂರ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಸ್ವಾಮ್ಯದ ಬಿ.ಎಸ್‌ಎನ್.ಎಲ್ ಸಂಸ್ಥೆಗೆ ಜವಾಬ್ದಾರಿಯನ್ನು ನೀಡಲಾಗಿದ್ದು, ಈಗಾಗಲೇ ದೋಳ್ಪಾಡಿ ಗ್ರಾಮವನ್ನು ದೂರ ಸಂಪರ್ಕ ಜಾಲವಿಲ್ಲದ ಗ್ರಾಮವನ್ನಾಗಿ ಆಯ್ಕೆ ಮಾಡಲಾಗಿದೆ. ಸದ್ರಿ ದೂರ ಸಂಪರ್ಕ ವ್ಯವಸ್ಥೆಯನ್ನು ಕಲ್ಪಿಸಲು ಸರಕಾರಿ ಜಾಗವನ್ನು ಒದಗಿಸಲು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ದೋಳ್ಪಾಡಿ ಗ್ರಾಮದಲ್ಲಿ ಸೂಕ್ತ ಸರಕಾರಿ ಜಾಗವನ್ನು ಗಡಿ ಗುರುತು ಮಾಡಲು ಸಂಬಂಧಪಟ್ಟ ಇಲಾಖೆಗೆ ಬರೆಯಲು ನಿರ್ಣಯಿಸಲಾಯಿತು.
ಪುಣ್ಚತ್ತಾರಿನಲ್ಲಿ ರಿಕ್ಷಾ ತಂಗುದಾಣ ನಿರ್ಮಿಸಿ..: ಪುಣ್ಚತ್ತಾರಿನಲ್ಲಿ ಈಗಾಗಲೇ ಸುಮಾರು 20 ಅಟೋ ರಿಕ್ಷಾಗಳು ಕಾರ್ಯಾಚರಿಸುತ್ತಿದ್ದು, ಪುಣ್ಚತ್ತಾರು ಪೇಟೆಯಲ್ಲಿ ರಿಕ್ಷಾ ತಂಗುದಾಣ ನಿರ್ಮಾಣಕ್ಕೆ ಜಾಗ ಕಾದಿರಿಸಲು ಗ್ರಾಮ ಪಂಚಾಯತ್‌ನಿಂದ ಅನುಮತಿ ನೀಡುವಂತೆ ಪುಣ್ಚತ್ತಾರಿನ ಶ್ರೀಹರಿ ಅಟೋ ರಿಕ್ಷಾ ಚಾಲಕ ಮಾಲಕರ ಸಂಘದವರು ಗ್ರಾ.ಪಂ.ಗೆ ನೀಡಿರುವ ಮನವಿ ಬಗ್ಗೆ ಪ್ರಸ್ತಾಪಿಸಲಾಯಿತು. ಈ ಬಗ್ಗೆ ಪುಣ್ಚತ್ತಾರಿನಲ್ಲಿ ರಿಕ್ಷಾ ತಂಗುದಾಣದ ಅವಶ್ಯಕತೆಯಿರುವ ನಿಟ್ಟಿನಲ್ಲಿ ಕ್ರಮಕೈಗೊಂಡು ನಾಮಫಲಕ ಅಳವಡಿಸುವ ಬಗ್ಗೆ ನಿರ್ಣಯಿಸಲಾಯಿತು.
ಗ್ರಾ.ಪಂ. ಉಪಾಧ್ಯಕ್ಷ ಗಣೇಶ್ ಉದನಡ್ಕ, ಸದಸ್ಯರಾದ ರಾಮಣ್ಣ ಗೌಡ ಮುಗರಂಜ, ಪ್ರವೀಣ್‌ಚಂದ್ರ ರೈ ಕುಮೇರು, ವಸಂತ ಪೆರ್ಲೋಡಿ, ದೇವಿಪ್ರಸಾದ್ ದೋಳ್ಪಾಡಿ, ಲೋಕಯ್ಯ ಪರವ ದೋಳ್ಪಾಡಿ, ತಾರಾನಾಥ ಇಡ್ಯಡ್ಕ, ಸುನಂದ ಅಬ್ಬಡ, ಕೀರ್ತಿಕುಮಾರಿ ಅಂಬುಲ, ತೇಜಕುಮಾರಿ ಉದ್ಲಡ್ಡ, ಸುಲೋಚನಾ ಮಿಯೋಳ್ಪೆ, ಅಂಬಾಕ್ಷಿ ಕೂರೇಲು, ಗಂಗಮ್ಮ ಗುಜ್ಜರ್ಮೆ, ಮೀರಾ ಉಪಸ್ಥಿತರಿದ್ದು ಚರ್ಚೆಯಲ್ಲಿ ಪಾಲ್ಗೊಂಡರು. ಪಂಚಾಯತ್ ಅಭಿವೃದ್ಧಿ ಅಽಕಾರಿ ದೇವರಾಜ್ ಸಭೆ ನಿರ್ವಹಿಸಿ ಇಲಾಖೆ ಸುತ್ತೋಲೆ, ಸಾರ್ವಜನಿಕ ಅರ್ಜಿ ಓದಿದರು. ಸಿಬ್ಬಂದಿ ತಿಮ್ಮಪ್ಪ ಗೌಡ ಬೀರುಕುಡಿಕೆ ಜಮಾಖರ್ಚು ವಿವರ ವಾಚಿಸಿದರು. ಸಿಬ್ಬಂದಿಗಳಾದ ಕುಮಾರ್, ಚಿತ್ರಾ, ಶಶಿಕಲಾ, ಕೀರ್ತಿ ಕುಮಾರ್ ಸಹಕರಿಸಿದರು.