ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ- ನಳಿನ್‌ ಕುಮಾರ್‌ ಕಟೀಲ್‌

0

ಪುತ್ತೂರು: ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಇದನ್ನು ತಡೆಯುವ ಕೆಲಸವನ್ನು ಕಾಂಗ್ರೆಸ್ ಮಾಡ್ತಾ ಇದೆ. ಕಾಂಗ್ರೆಸ್ ನ ಹೀನಾ ರಾಜಕಾರಣ ಮತ್ತು ಸಿದ್ದರಾಮಯ್ಯ ಮಾನಸೀಕತೆ ಬಯಲಾಗಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೀತಿದೆ. ಆಯುಧ ಪೂಜೆ, ಶಿಲಾನ್ಯಾಸಗಳ ಸಮಯದಲ್ಲಿ ಸಂಪ್ರದಾಯಬದ್ದವಾಗಿ ಪೂಜೆ ನಡೆದಿದೆ. ಒಬ್ಬ ಮುಖ್ಯಮಂತ್ರಿ ಸಾಂವಿಧಾನಿಕವಾಗಿ ವ್ಯಕ್ತಿಯ ಧಾರ್ಮಿಕ ಆಚರಣೆಗೆ ಅಡ್ಡಿ ಬರೋದು ಸರಿಯಲ್ಲ ಎಂದು ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಹೇಳಿದ್ದಾರೆ.

ಮಂಗಳೂರಿನಲ್ಲಿ ಬಿಜೆಪಿ ಕಛೇರಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು ಹಿಂದಿನಿಂದ ನಡೆದುಕೊಂಡು ಬಂದ ಪೂಜೆಗಳನ್ನ ಕೆಲವು ಇಲಾಖೆಗಳಲ್ಲಿ ಮಾಡ್ತಾರೆ. ನಂಬಿಕೆಗಳ ಆಧಾರದಲ್ಲಿ ಕೆಎಸ್ಸಾರ್ಟಿಸಿ, ಪೊಲೀಸ್ ಠಾಣೆಗಳಲ್ಲಿ ಆಯುಧ ಪೂಜೆ ಮಾಡ್ತಾರೆ. ಇಂಥ ಪೂಜೆಗಳನ್ನು ನಿಷೇಧಿಸುವ, ಬಹಿಷ್ಕಾರ ಹಾಕುವ ಕ್ರಮ ಸರಿಯಲ್ಲ. ಪೂಜೆ ಮಾಡುವ ಪೊಲೀಸರನ್ನು ಒಂದು ಪಾರ್ಟಿಗೆ ಸೀಮಿತ ಮಾಡುವ ಹೀನ ರಾಜಕಾರಣ ಕಾಂಗ್ರೆಸ್ ನಿಂದ ಆಗ್ತಿದೆ. ನೈತಿಕ ಪೊಲೀಸ್ ಗಿರಿ ವಿಚಾರದಲ್ಲಿ ಭಜರಂಗದಳ ನಿಷೇಧವನ್ನು ಉಲ್ಲೇಖ ಮಾಡುತ್ತಿದ್ದಾರೆ. ಇದು ಕಾಂಗ್ರೆಸ್ ಹಿಂದೂ ಸಮಾಜದ ಮೇಲೆ ಹೇಗೆ ಸವಾರಿ ಮಾಡುತ್ತೆ ಅನ್ನೋದನ್ನು ತೋರಿಸುತ್ತದೆ. ಇಂಥದ್ದರ ವಿರುದ್ದ ಹೋರಾಟ ಮಾಡಿ ಉತ್ತರ ಕೊಡೋ ಶಕ್ತಿ ಬಿಜೆಪಿಗಿದೆ ಎಂದು ಹೇಳಿದ ಅವರು ಸಿದ್ದರಾಮಯ್ಯ ಮತ್ತು‌ ಕಾಂಗ್ರೆಸ್ ನ ಮಾನಸಿಕತೆಯನ್ನು ವಿರೋಧಿಸುತ್ತೇನೆ. ಸಂಘಟನೆ ಕಾರ್ಯಗಳಿಗೆ ಕೈ ಹಾಕಿದ್ರೆ ನಾವು ಉತ್ತರ ಕೊಡುತ್ತೇವೆ ಎಂದು ಹೇಳಿದ್ದಾರೆ.

ಮುಂದುವರಿದು ಮಾತನಾಡಿದ ಅವರು ಎಲ್ಲಾ ಇಲಾಖೆಗಳಲ್ಲೂ ರಾಜಕಾರಣ ಮಾಡುವ ಕೆಲಸಕ್ಕೆ ಕಾಂಗ್ರೆಸ್ ಕೈ ಹಾಕಿದೆ. ಅಧಿಕಾರಿಗಳನ್ನು ಕಂಟ್ರೋಲ್ ಮಾಡಿ ಕಾಂಗ್ರೆಸ್ ಅಜೆಂಡಾ ಹೇರುವ ಕೆಲಸ ಮಾಡುತ್ತಿದೆ. ಹಿಂದಿನ ಎಲ್ಲಾ ಜಿಲ್ಲಾಧಿಕಾರಿಗಳು ಒಳ್ಳೆಯ ಕೆಲಸ ಮಾಡಿ ರಾಜ್ಯ ಅಭಿವೃದ್ಧಿ ಆಗಿದೆ. ಇವತ್ತು ಅಂಥಹ ಅಧಿಕಾರಿಗಳನ್ನು ಬೆದರಿಸುವ ತಂತ್ರಗಾರಿಕೆ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ನಾವು ಹೋರಾಟದ ಮೂಲಕ ಕಾಂಗ್ರೆಸ್ ಗೆ ಉತ್ತರ ಕೊಡುತ್ತೇವೆ. ಕಾಂಗ್ರೆಸ್ ಗೆ ಬಹುಮತ ಕೊಟ್ಟರೂ ಗಲಾಟೆ ಮಾಡ್ತಾ ಇದ್ದಾರೆ. ಜನಾಶೀರ್ವಾದ ಸಿಕ್ಕರೂ ಇವರ ಬೀದಿ ಜಗಳ ಜೋರಾಗಿದೆ. ಇನ್ನೂ ಮಂತ್ರಿ ಮಂಡಲ ರಚನೆ ಆಗಿಲ್ಲ, ಇದು ರಚನೆ ಆದ್ರೆ ಕಾಂಗ್ರೆಸ್ ನ ಸ್ಥಿತಿ ಏನಾಗುತ್ತೆ ಕಾದು ನೋಡಿ. ನಮ್ಮ 40% ಕಮಿಷನ್ ವಿರುದ್ದ ಇವರು ತನಿಖೆ ಮಾಡಲಿ. ಜೊತೆಗೆ ಸಿದ್ದರಾಮಯ್ಯ ವಿರುದ್ದ ನಾವು ಲೋಕಾಯುಕ್ತಕ್ಕೆ ಕೊಟ್ಟ ದೂರಿನ ತನಿಖೆಯೂ ಆಗಲಿ ಎಂದು ಅವರು ಆಗ್ರಹಿಸಿದ್ದಾರೆ.

ವಿಡಿಯೋಗಾಗಿ ಇಲ್ಲಿ ಕ್ಲಿಕ್‌ ಮಾಡಿ

LEAVE A REPLY

Please enter your comment!
Please enter your name here