ಜೆಇಇ ಆರ್ಕಿಟೆಕ್ಚರ್ ಪ್ರವೇಶ ಪರೀಕ್ಷೆ: ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿಗೆ ಉತ್ತಮ ಫಲಿತಾಂಶ

0

ಉಪ್ಪಿನಂಗಡಿ: ಆರ್ಕಿಟೆಕ್ಚರ್ ಕೋರ್ಸುಗಳಿಗೆ ನಡೆಸಲಾಗುವ ರಾಷ್ಟ್ರ ಮಟ್ಟದ ಪ್ರವೇಶ ಪರೀಕ್ಷೆ ಜೆಇಇ ಫಲಿತಾಂಶಗಳು ಪ್ರಕಟವಾಗಿದ್ದು, ಇಲ್ಲಿನ ಇಂದ್ರಪ್ರಸ್ಥ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳಾದ ಆಶ್ರಯದತ್ತ 37ನೇ ರ‍್ಯಾಂಕ್ ಹಾಗೂ ಶ್ರೀಹರಿ ಐಬಿ 192ನೇ ರ‍್ಯಾಂಕ್ ಪಡೆಯುವ ಮೂಲಕ ಕಾಲೇಜಿನ ಶೈಕ್ಷಣಿಕ ಇತಿಹಾಸದಲ್ಲಿ ಹೊಸ ಮೈಲುಗಲ್ಲು ಸ್ಥಾಪಿಸಿದ್ದಾರೆ. ಕಾಲೇಜಿನ ವಿದ್ಯಾರ್ಥಿಗಳು ನಿರಂತರವಾಗಿ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಮತ್ತು ವಿದ್ಯಾವರ್ಧಕ ಸಂಘದ ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳು ಸರ್ವಾಂಗೀಣ ಪ್ರದರ್ಶನವನ್ನು ತೋರುತ್ತಿದ್ದಾರೆ ಎಂದು ಪ್ರಾಂಶುಪಾಲರಾದ ಎಚ್ ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here