ಕುಂಬ್ರ ಬಾಲಕೃಷ್ಣ ರೈ ಸ್ಮರಣಾರ್ಥ ಯಕ್ಷಧ್ರುವ ಪಟ್ಲ ಫೌಂಡೇಶನ್‌ಗೆ 25 ಸಾವಿರ ರೂ.ದೇಣಿಗೆ

0

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಇದರ ಆಶ್ರಯದಲ್ಲಿ ಪುತ್ತೂರಿನಲ್ಲಿ ಇತ್ತೀಚೆಗೆ ನಡೆದ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಪುತ್ತೂರು ಇದರ 6 ನೇ ವಾರ್ಷಿಕ ಸಮಾರಂಭದಲ್ಲಿ ಯಕ್ಷಗಾನ ಸಂಘಟಕ, ಕಲಾಪೋಷಕ ಕುಂಬ್ರ ಬಾಲಕೃಷ್ಣ ರೈ ಸ್ಮರಣಾರ್ಥ ಅವರ ಪುತ್ರ ಸಂತೋಷ್ ರೈ ಮೇಗಿನಗುತ್ತು ಕುಂಬ್ರ ಇವರು ಯಕ್ಷಧ್ರುವ ಪಟ್ಲ ಫೌಂಡೇಶನ್‌ಗೆ ರೂ.25 ಸಾವಿರ ದೇಣಿಗೆಯನ್ನು ನೀಡಿದರು. ಚೆಕ್ ಅನ್ನು ಪಟ್ಲ ಫೌಂಡೇಶನ್‌ನ ಸ್ಥಾಪಕ ಅಧ್ಯಕ್ಷ ಪಟ್ಲ ಸತೀಶ್ ಶೆಟ್ಟಿಯವರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸವಣೂರು ವಿದ್ಯಾರಶ್ಮಿ ಶಿಕ್ಷಣ ಸಂಸ್ಥೆಗಳ ಸಂಚಾಲಕ ಸವಣೂರು ಕೆ.ಸೀತಾರಾಮ ರೈ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಮುಳಿಯ ಕೇಶವ ಪ್ರಸಾದ್, ಯಕ್ಷಧ್ರುವ ಪಟ್ಲ ಫೌಂಡೇಶನ್ ಪುತ್ತೂರು ಘಟಕದ ಅಧ್ಯಕ್ಷ ನೋನಲ್ ಜಯರಾಮ ಭಂಡಾರಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ನವೀನ್ ಭಂಡಾರಿ, ಯದು ಕುಮಾರ್ ಕೊಳತ್ತಾಯ, ಡಿಸಿಸಿ ಬ್ಯಾಂಕ್ ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು ಸಹಿತ ಹಲವು ಮಂದಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here