ಮೇ .27- ಅಗಳಿ ಶ್ರೀ ಸದಾಶಿವ ದೇವಸ್ಥಾನದಲ್ಲಿ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ ಧಾರ್ಮಿಕ ಸಭೆ

0

ಕಾಣಿಯೂರು: ಶ್ರೀ.ಕ್ಷೇ.ಧ.ಗ್ರಾ.ಯೋಜನೆ ಬಿ.ಸಿ ಟ್ರಸ್ಟ್, ಸ್ವಸಹಾಯ ಸಂಘಗಳ ಒಕ್ಕೂಟ ಬೆಳಂದೂರು ಇದರ ಆಶ್ರಯದಲ್ಲಿ ಶ್ರೀ ಸದಾಶಿವ ದೇವಸ್ಥಾನ ಅಗಳಿ ಇದರ ಸಹಕಾರದೊಂದಿಗೆ ಸಾರ್ವಜನಿಕ ಕಲ್ಪೋಕ್ತ ಶನೈಶ್ಚರ ಪೂಜೆ ಮತ್ತು ಧಾರ್ಮಿಕ ಕಾರ್ಯಕ್ರಮವು ಮೇ 27ರಂದು ಅಗಳಿ ಶ್ರೀ ಸದಾಶಿವ ದೇವಸ್ಥಾನದ ಸಮುದಾಯ ಭವನದಲ್ಲಿ ನಡೆಯಲಿದೆ.

ಬೆಳಿಗ್ಗೆ ಶ್ರೀ ಕಲ್ಪೋಕ್ತ ಶನೈಶ್ಚರ ಪೂಜೆ, ಮಹಾಪೂಜೆ, ಧಾರ್ಮಿಕ ಸಭಾ ಕಾರ್ಯಕ್ರಮ, ಮಧ್ಯಾಹ್ನ ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಲಿದೆ. ಬೆಳಿಗ್ಗೆ ನಡೆಯುವ ಧಾರ್ಮಿಕ ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅಗಳಿ ಶ್ರೀ ಸದಾಶಿವ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಉದಯ ರೈ ಮಾದೋಡಿ ನೆರವೇರಿಸಲಿದ್ದಾರೆ.

ಬೆಳಂದೂರು ಒಕ್ಕೂಟದ ಅಧ್ಯಕ್ಷ ಶೇಷಪ್ಪ ಅಬೀರ ಅಧ್ಯಕ್ಷತೆ ವಹಿಸಲಿದ್ದಾರೆ. ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶ್ ಕೆ ಸವಣೂರು, ಸವಣೂರು ವಲಯ ಸ್ವಸಹಾಯ ಸಂಘಗಳ ಒಕ್ಕೂಟದ ರಾಮಚಂದ್ರ ಇಡ್ಯಡ್ಕ, ಕಾಣಿಯೂರು ಶ್ರೀ ಲಕ್ಷ್ಮೀನರಸಿಂಹ ಯುವಕ ಮಂಡಲದ ಸುರೇಶ್ ಓಡಬಾಯಿ, ಅಗಳಿ ಶ್ರೀ ವರಮಹಾಲಕ್ಷ್ಮೀ ಪೂಜಾ ಸಮಿತಿ ಅಧ್ಯಕ್ಷೆ ಚಂಪಾ ಕುಶಾಲಪ್ಪ ಅಬೀರ, ಅಗಳಿ ಶ್ರೀ ಸದಾಶಿವ ಯುವಕ ಮಂಡಲದ ಅಧ್ಯಕ್ಷ ಪುರಂದರ ಅಗಳಿ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪುತ್ತೂರು ಸ್ವರ್ಣ ರೋಟರಿ ಕ್ಲಬ್‌ನ ಅಧ್ಯಕ್ಷ ವೆಂಕಟ್ರಮಣ ಗೌಡ ಕಳುವಾಜೆ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ ಸಮಿತಿ ಪದಾಧಿಕಾರಿಗಳು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here