ಪುತ್ತೂರು: ಆರ್ಯಭಟ ಸಾಂಸ್ಕೃತಿಕ ಸಂಸ್ಥೆ ವತಿಯಿಂದ ನೀಡಲಾಗುವ ಪ್ರತಿಷ್ಠಿತ ಆರ್ಯಭಟ ಅಂತರ್ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆಯಾಗಿದ್ದ ಕರ್ನಾಟಕದ ನಿಕಟಪೂರ್ವ ಹೆಚ್ಚುವರಿ ಅಡ್ವೊಕೇಟ್ ಜನರಲ್, ಹೈಕೋರ್ಟ್ನ ಹಿರಿಯ ವಕೀಲರಾಗಿರುವ ಪುತ್ತೂರು ಮೂಲದ ಅರುಣ್ ಶ್ಯಾಂ ಅವರಿಗೆ ಮೇ 25ರಂದು ಪ್ರಶಸ್ತಿ ಪ್ರದಾನ ಮಾಡಲಾಯಿತು.ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಸಮಾರಂಭದಲ್ಲಿ ಹೈಕೋರ್ಟ್ ನ್ಯಾಯಮೂರ್ತಿ ಪಿ.ಎಸ್.ದಿನೇಶ್ ಕುಮಾರ್, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ| ಮಹೇಶ್ ಜೋಷಿ, ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಟಿ.ಎಸ್.ನಾಗಾಭರಣ, ಆರ್ಯಭಟ ಸಾಂಸ್ಕೃತಿಕ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ|ಹೆಚ್.ಎಲ್.ಎನ್ ರಾವ್ರವರ ಸಮಕ್ಷಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.