ಬೆಟ್ಟಂಪಾಡಿ: ನವಕ ಕಲಶಾಭಿಷೇಕ, ಅಶ್ವತ್ಥೋಪನಯನ

0

ಬೆಟ್ಟಂಪಾಡಿ: ಇಲ್ಲಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವರ್ಷದ ಕೊನೆಯ ಜಾತ್ರೆ ಪತ್ತನಾಜೆ ಜಾತ್ರೆ ಪ್ರಯುಕ್ತ ಮೇ 25 ರಂದು ಬೆಳಿಗ್ಗೆ ನವಕ ಕಲಶಾಭಿಷೇಕ, ತುಲಾಭಾರ ಸೇವೆ ನಡೆದು ಮಧ್ಯಾಹ್ನ ಮಹಾಪೂಜೆಯಾಗಿ ಅನ್ನಸಂತರ್ಪಣೆ ಜರಗಿತು.

ಬೆಳಿಗ್ಗೆ 6 ಗಂಟೆಯಿಂದ ಕ್ಷೇತ್ರದ ವಠಾರದಲ್ಲಿರುವ ಅಶ್ವತ್ಥ ವೃಕ್ಷಕ್ಕೆ ಅಶ್ವತ್ಥೋಪನಯನ, ವಿವಾಹಾಂತ ಸಂಸ್ಕಾರ ಕ್ರಿಯಾ ಭಾಗ ಮತ್ತು ಅಶ್ವತ್ಥ ಕಲ್ಪೋಕ್ತ ಪೂಜೆ ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ನೆರವೇರಿತು.

ದೇವಳದ ಪ್ರಧಾನ ಅರ್ಚಕ ವೇ.ಮೂ. ವೆಂಕಟ್ರಮಣ ಭಟ್ ಕಾನುಮೂಲೆ, ನಿವೃತ್ತ ಅರ್ಚಕ ದಿವಾಕರ ಭಟ್ ಕಾನುಮೂಲೆ, ಅನುವಂಶಿಕ ಆಡಳಿತ ಮೊಕ್ತೇಸರ ವಿನೋದ್ ಕುಮಾರ್ ಬಲ್ಲಾಳ್, ಮೊಕ್ತೇಸರ ವಿನೋದ್ ರೈ ಗುತ್ತು, ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಮನಮೋಹನ ರೈ ಚೆಲ್ಯಡ್ಕ, ಸಂಚಾಲಕ ವೇ.ಮೂ. ದಿನೇಶ್ ಮರಡಿತ್ತಾಯ ಗುಮ್ಮಟೆಗದ್ದೆ, ಆಡಳಿತ ಮಂಡಳಿ ಮತ್ತು ಅಭಿವೃದ್ಧಿ ಸಮಿತಿಯ ಪದಾಧಿಕಾರಿಗಳು, ಸದಸ್ಯರು, ಭಕ್ತಾಭಿಮಾನಿಗಳು ಪಾಲ್ಗೊಂಡರು.

LEAVE A REPLY

Please enter your comment!
Please enter your name here