ಜೂ.1: ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಆಕಾಶವಾಣಿಯಲ್ಲಿ ಫೋನ್-ಇನ್

0

ಮಂಗಳೂರು: ಕರ್ನಾಟಕ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗವು ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಗ್ರಾಹಕರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಜೂ.1ರ ರಾತ್ರಿ 8ರಿಂದ 8.30ರವರೆಗೆ ಆಕಾಶವಾಣಿಯಲ್ಲಿ ಫೋನ್-ಇನ್ ನೇರ ಪ್ರಸಾರ ಕಾರ್ಯಕ್ರಮ ಹಮ್ಮಿಕೊಂಡಿದೆ. ಯಾವುದೇ ಪ್ರಶ್ನೆಗಳಿದ್ದಲ್ಲಿ ಗ್ರಾಹಕರು ದೂ.ಸಂಖ್ಯೆ: 080&22370477, 22370488, 22370488ಗೆ ಕರೆ ಮಾಡಿ ಮಾಹಿತಿ ಪಡೆಯಬಹುದು. ಗ್ರಾಹಕರು ತಮ್ಮ ಪ್ರಶ್ನೆಗಳನ್ನು ಇ-ಮೇಲ್ [email protected] ಮೂಲಕ ಮೇ 31ರೊಳಗೆ ಕಳಿಸಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ನೋಂದಣಾಧಿಕಾರಿ ಹಾಗೂ ಸಹಾಯಕ ಆಡಳಿತಾಧಿಕಾರಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here