ವಿವೇಕಾನಂದ ಆ.ಮಾ ಶಾಲೆಯಲ್ಲಿ “ಅಭಿವಂದನಮ್-2023” ಕಾರ್ಯಕ್ರಮ

0

ಪುತ್ತೂರು: ಮಕ್ಕಳ ಸಾಧನೆಯ ಹಿಂದೆ ಶಿಕ್ಷಕರ ಪರಿಶ್ರಮ ಹೆಚ್ಚಿನ ಮಹತ್ವ ಪಡೆಯುತ್ತದೆ. ಸಾಧನೆಗೆ ಬುದ್ಧಿವಂತಿಕೆಯ ಜೊತೆಗೆ ಸತತ ಪರಿಶ್ರಮ ಅಗತ್ಯ ಎಂದು ಸಮಾಜ ಸೇವಾ ಕಾರ್ಯಕರ್ತ  ಯತೀಶ್ ಆರ್ವಾರ್ ಹೇಳಿದರು. ಅವರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022 23ನೇ ಸಾಲಿನ 10ನೇ ತರಗತಿ ವಿದ್ಯಾರ್ಥಿಗಳ ಸನ್ಮಾನ ಕಾರ್ಯಕ್ರಮ, “ಅಭಿವಂದನಮ್-2023″ರ ಮುಖ್ಯ ಅತಿಥಿಗಳಾಗಿ ಮಾತನಾಡಿದರು.

ನಾವು ನಮಗೋಸ್ಕರ ಮಾತ್ರವಲ್ಲದೇ ದೇಶಕ್ಕೋಸ್ಕರ ಬದುಕಬೇಕು. ಕೃಷ್ಣಂ ವಂದೇ ಜಗದ್ಗುರುಮ್ ಎಂಬ ನಂಬಿಕೆ ಇರುವ ನಾವು ಆಧ್ಯಾತ್ಮಿಕ ಹಾಗೂ ಧಾರ್ಮಿಕ ಭಾವನೆಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.

 ಮುಖ್ಯ ಅತಿಥಿಗಳಾಗಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶಿವಪ್ರಕಾಶ್. ಎಂ ಹಾಗೂ ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿಗಳಾದ  ಸುಂದರ ಗೌಡ ಇವರು ವಿದ್ಯಾರ್ಥಿಗಳ ಉಜ್ವಲ ಭವಿಷ್ಯಕ್ಕೆ ಶುಭ ಹಾರೈಸಿದರು. 

ಸಭಾಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ನಿರ್ದೇಶಕ ಮುರಳೀಧರ.ಕೆ ಮಾತನಾಡಿ ಹಲವಾರು  ವರ್ಷಗಳ ಪರಿಶ್ರಮದಿಂದ ಗಳಿಸಿದ ಈ ಸಾಧನೆಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ ಕಿರಿಯರ ಮೇಲಿದೆ ಎಂದು ಹೇಳಿದರು. 

ಸನ್ಮಾನ ಸ್ವೀಕರಿಸಿ ಮಾತನಾಡಿದ ಕರ್ನಾಟಕ ರಾಜ್ಯಕ್ಕೆ ತೃತೀಯ ಸ್ಥಾನ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿನಿ ಕುಮಾರಿ ಹಿಮಾನಿ ತಾನು ಕಲಿತ ಸಂಸ್ಥೆ ಮತ್ತು ಮಾರ್ಗದರ್ಶನ ನೀಡಿದ ಶಿಕ್ಷಕ ವೃಂದವನ್ನು ಸ್ಮರಿಸಿಕೊಂಡು, ತನ್ನ ಶಾಲಾ ಜೀವನದ ಅನುಭವಗಳನ್ನು ಹಂಚಿಕೊಂಡರು.ವೇದಿಕೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸದಸ್ಯರು, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಶಾಂತಿ ಶೆಣೈ ಉಪಸ್ಥಿತರಿದ್ದರು.

ವಿಶೇಷ ಸಾಧನೆಗೈದ ವಿದ್ಯಾರ್ಥಿಗಳಿಗೆ  ಸಾಧಕ ವಿದ್ಯಾರ್ಥಿಗಳೆಲ್ಲರನ್ನೂ ಅವರ ಪೋಷಕರೊಂದಿಗೆ ಪ್ರಶಸ್ತಿ ಪತ್ರ, ಸ್ಮರಣಿಕೆ ಹಾಗೂ ಶಾಲು ಹೊದಿಸಿ ಅಬಿನಂದಿಸಿದರು.

 ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಆಡಳಿತ ಮಂಡಳಿ ಸಂಚಾಲಕ  ರವಿನಾರಾಯಣ ಎಂ ಪ್ರಾಸ್ತಾವಿಕವಾಗಿ ಮಾತನಾಡಿ, ಸ್ವಾಗತಿಸಿದರು. ಸಹಶಿಕ್ಷಕ  ರಾಧಾಕೃಷ್ಣ ರೈ ವಂದಿಸಿದರು. ಸಹಶಿಕ್ಷಕಿಯರಾದ ಸೌಮ್ಯ ಕುಮಾರಿ ಹಾಗೂ  ಅನುರಾಧಾ ಕಾರ್ಯಕ್ರಮ ನಿರೂಪಿಸಿದರು. ಸಹಶಿಕ್ಷಕ ಪ್ರಶಾಂತ್ ಭಟ್ ಮತ್ತು ಪುಷ್ಪಲತಾ.ಬಿ.ಕೆ ಸಾಧನೆಗೈದ ವಿದ್ಯಾರ್ಥಿಗಳ ಪಟ್ಟಿ ವಾಚಿಸಿದರು. 

LEAVE A REPLY

Please enter your comment!
Please enter your name here