ಮೇ 29: ಸಿರಿಕಡಮಜಲು ಕೃಷಿ ಕ್ಷೇತ್ರದಲ್ಲಿ ರಬ್ಬರ್ ತೋಟಕ್ಕೆ ಔಷಧ ಸಿಂಪರಣೆ – ಡ್ರೋನ್ ಪ್ರಾತ್ಯಕ್ಷಿಕೆ

0

ಪುತ್ತೂರು: ಬ್ಯಾಂಕ್ ಆಫ್ ಬರೋಡಾ ಪ್ರಾಯೋಜಕತ್ವದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ – ಕೆದಂಬಾಡಿ ಗ್ರಾಮ ಇದರ ಆಶ್ರಯದಲ್ಲಿ ರಬ್ಬರ್ ತೋಟಕ್ಕೆ ಕೋಪರ್ ಒಕ್ಸಿಕ್ಲೋರೈಡ್ ಸಿಂಪರಣೆ ಡ್ರೋನ್ ಪ್ರಾತ್ಯಕ್ಷಿಕೆ ಮಾಹಿತಿ ಕಾರ್ಯಾಗಾರ ಮೇ 29 ರಂದು ಸಿರಿಕಡಮಜಲು ಕೃಷಿ ಕ್ಷೇತ್ರದಲ್ಲಿ ನಡೆಯಲಿದೆ.


ಬೆಳಿಗ್ಗೆ ಬ್ಯಾಂಕ್ ಆಫ್ ಬರೋಡ ಮಂಗಳೂರು ಜಿಲ್ಲಾ ಕ್ಷೇತ್ರ ಪ್ರಾದೇಶಿಕ ವ್ಯವಸ್ಥಾಪಕ ದೇವಿಪ್ರಸಾದ್ ಶೆಟ್ಟಿ ಕಾರ್ಯಗಾರವನ್ನು ಉದ್ಘಾಟಿಸಲಿದ್ದಾರೆ. ಕೆಯ್ಯೂರು ಕೆದಂಬಾಡಿ ರಬ್ಬರ್ ಉತ್ಪಾದಕರ ಸಂಘದ ಅಧ್ಯಕ್ಷ ಎ.ಕೆ. ಜಯರಾಮ ರೈ ಸಭಾಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯದರ್ಶಿ ಬಿ. ರಾಜೇಂದ್ರ ರೈ, ಕಾರ್ಯನಿರ್ವಹಣಾಧಿಕಾರಿ ಸಚಿನ್ ಹೆಗ್ಡೆ, ಬ್ಯಾಂಕ್ ಆಫ್ ಬರೋಡ ಕುಂಬ್ರ ಶಾಖೆಯ ಹಿರಿಯ ವ್ಯವಸ್ಥಾಪಕ ಜೆ. ರಾಜಾ ಭಾಗವಹಿಸಲಿದ್ದಾರೆ.

ಪುತ್ತೂರು ಪ್ರಾದೇಶಿಕ ಕಚೇರಿಯ ರಬ್ಬರ್ ಉತ್ಪಾದನಾ ಆಯುಕ್ತರಾದ ಡಿ. ಸುರೇಶ್ ಕುಮಾರ್ ಹಾಗೂ ರಬ್ಬರ್ ಮಂಡಳಿ ಪ್ರಾದೇಶಿಕ ಕಚೇರಿಯ ಸಹಾಯಕ ಅಭಿವೃದ್ಧಿ ಅಧಿಕಾರಿ ಶೋಭಾನ ಮಾಹಿತಿ ಕಾರ್ಯಾಗಾರ ನಡೆಸಿಕೊಡಲಿದ್ದಾರೆ. ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಕಾರ್ಯಕಾರಿ ಸಮಿತಿ ಸದಸ್ಯ ಕಡಮಜಲು ಸುಭಾಸ್ ರೈ ಡ್ರೋನ್ ಪ್ರಾತ್ಯಕ್ಷಿಕೆಯನ್ನು ಉದ್ಘಾಟಿಸಲಿದ್ದಾರೆ.

ಆಸಕ್ತ ರಬ್ಬರ್ ಕೃಷಿಕರು ಈ ಕಾರ್ಯಾಗಾರದಲ್ಲಿ ಭಾಗವಹಿಸಿ ಸದುಪಯೋಗಪಡೆದುಕೊಳ್ಳಬಹುದಾಗಿದೆ. ಬೆಳಿಗ್ಗೆ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆ ಮಾಡಲಾಗಿದೆ ಎಂದು ವಿಜಯ ಗ್ರಾಮೀಣ ಅಭಿವೃದ್ಧಿ ಸಮಿತಿ ಕೆದಂಬಾಡಿ ಗ್ರಾಮದ ಪದಾಧಿಕಾರಿಗಳು ಹಾಗೂ ಕಡಮಜಲು ಸುಭಾಸ್ ರೈ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ‌.

LEAVE A REPLY

Please enter your comment!
Please enter your name here